ಗುಂಡ್ಲುಪೇಟೆ:ತಾಲ್ಲೂಕಿನ ಹುಲಗಿನ ವೆಂಕಟರಮಣಸ್ವಾಮಿ ಬೆಟ್ಟಕ್ಕೆ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಂಕ್ರಾಂತಿ ಹಬ್ಬದ ರಥೋತ್ಸವದ ಮರುಪೂಜೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಶನಿವಾರ ಜಿಲ್ಲಾಧಿಕಾರಿ ಡಿ. ಎಸ್. ರಮೇಶ್, ಉಪವಿಭಾಗಾಧಿಕಾರಿ ಗೀತಾ ಹುಡೇದಾ, ತಹಶಿಲ್ದಾರ್ ಬಸವರಾಜು ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ದೇವಸ್ಥಾನದ ಅರ್ಚಕರು ಮಂಗಳವಾದ್ಯದ ಮೇಳದೊಂದಿಗೆ ಪೂರ್ಣಕುಂಭದಿಂದ ಸ್ವಾಗತ ಮಾಡಿಕೊಂಡರು. ನಂತರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.