Mysore
23
overcast clouds

Social Media

ಮಂಗಳವಾರ, 24 ಜೂನ್ 2025
Light
Dark

ಗುಂಡ್ಲುಪೇಟೆ : ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಪ್ರತಿಭಟನೆ

ಗುಂಡ್ಲುಪೇಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು, ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ತಾಲ್ಲೂಕು ಕಚೇರಿಗೆ ಬಂದು ಸಮಾವೇಶಗೊಂಡು ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ವಜಾ ಮಾಡಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ತಹಸಿಲ್ದಾರ್ ರವಿಶಂಕರ್ ಮೂಲಕ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು, ತಾ.ಪಂ. ಮಾಜಿ ಅಧ್ಯಕ್ಷ ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ಮೃತ್ಯುಂಜಯ, ಪುರಸಭೆ ಸದಸ್ಯ ನಾ.ಕುಮಾರ್, ಎಪಿಎಂಸಿ ನಿರ್ದೇಶಕರಾದ ಮೊಳ್ಳಯ್ಯನಹುಂಡಿ ಬಸವರಾಜಪ್ಪ, ವಿರೂಪಾಕ್ಷ, ಜಿ.ಕೆ.ಎನ್.ವಿಶ್ವ, ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್, ಟೌನ್ ಅಧ್ಯಕ್ಷ ಅರುಣ್ ಚಿಟ್ಟೆ, ಬೇಗೂರು ಬ್ಲಾಕ್ ಅಧ್ಯಕ್ಷ ಮೋಹನ್ ದಾಸ್, ಮಂಜು ಶಿವಪುರ, ಮಡಹಳ್ಳಿ ಮಣಿ, ಮಾಡ್ರಹಳ್ಳಿ ನವೀನ್, ಮಳವಳ್ಳಿ ಅಭಿ, ಲೋಕಿ ಗೋಪಾಲಪುರ ಮತ್ತಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!