Mysore
26
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಗುಂಡ್ಲುಪೇಟೆ : ಗೋಪಾಲಸ್ವಾಮಿ ಬೆಟ್ಟಕ್ಕೆ ಬಂದಿದ್ದ ವ್ಯಕ್ತಿ ಸಾವು!

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಂದಿದ್ದ ಚಿತ್ರದುರ್ಗ ಮೂಲದ ವ್ಯಕ್ತಿ ಒಬ್ಬರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಸಿಗದೆ ಪಟ್ಟಿರುವ ಘಟನೆ ನಡೆದಿದೆ.

ಚಿತ್ರದುರ್ಗ ಮೂಲದ 32 ವರ್ಷದ ಅನಿಲ್ ಎಂಬ ವ್ಯಕ್ತಿಯೇ ಮೃತಪಟ್ಟವರು. ಅನಿಲ್ ಅವರು ತಮ್ಮ ಕುಟುಂಬದೊಟ್ಟಿಗೆ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ದರ್ಶನವನ್ನು ಮುಗಿಸಿ ವಾಪಸಾಗುತ್ತಿದ್ದ ವೇಳೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಈ ವೇಳೆ ಅವರನ್ನು ಆಂಬುಲೆನ್ಸ್ ಮೂಲಕ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದ ಕಾರಣ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಜಯದೇವ ಆಸ್ಪತ್ರೆಗೆ ಕಳುಹಿಸಲು ಮುಂದಾಗಿದ್ದಾರೆ ಈ ವೇಳೆ ಅನಿಲ್ ಅವರು ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಆರೋಪಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಂಜುನಾಥ್ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಅನಿಲ್ ಅವರ ಪತ್ನಿ ಮತ್ತು ಆರೋಪವನ್ನು ತಳ್ಳಿಹಾಕಿದ್ದು. ಮೃತಪಟ್ಟ ಅನಿಲ್ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿದ್ದು. ಆಕ್ಸಿಜನ್ ಕೊಟ್ಟು ಅವರನ್ನು ಮೈಸೂರಿಗೆ ಕಳುಹಿಸುವ ಸಂದರ್ಭದಲ್ಲಿ ಹೃದಯಘಾತವಾಗಿದ್ದು ಮತ್ತೆ ಒಳಗೆ ಕರೆದು ಚಿಕಿತ್ಸೆ ನೀಡಿದರು ಪ್ರಯೋಜನವಾಗಲಿಲ್ಲ. ಅವರ ಸಾವಿಗೆ ಆಕ್ಸಿಜನ್ ಕಾರಣವಲ್ಲ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!