ಹನೂರು: ಜಾತ್ಯಾತೀತತೆ ಎಂಬುದು ಕೇವಲ ಪಕ್ಷಕಷ್ಟೇ ಸೀಮಿತ ಕುಮಾರಸ್ವಾಮಿಯವರ ಮನಸ್ಸು ಮತ್ತು ಮಾತಿನಲ್ಲಿ ಜಾತಿಯತೆ ಎಂಬುದು ಎದ್ದು ಕಾಣುತ್ತಿದೆ. ಈ ಕೂಡಲೇ ರಾಜ್ಯದ ಜನತೆಯಲ್ಲಿ ಬಹಿರಂಗ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಮುಖಂಡ ನಿಶಾಂತ್ ಎಚ್ಚರಿಕೆ ನೀಡಿದರು
ಕುಮಾರಸ್ವಾಮಿ ರವರ ಅಸ್ಪೃಶ್ಯತೆ ಎಂಬ ಹೇಳಿಕೆ ಖಂಡಿಸಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೌನ ಪ್ರತಿಭಟನೆಯಲ್ಲಿ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಡಾಕ್ಟರ್ ಅಂಬೇಡ್ಕರ್ ಅವರ ಪುತ್ತಳಿಗೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರವು ಎಲ್ಲಾ ಸಮಾಜದವರಿಗೂ ಸಮಾನ ಹಕ್ಕು ನೀಡಿದೆ. ಎಲ್ಲೂ ಸಹ ಸಂವಿಧಾನ ವಿರೋಧಿ ಹೇಳಿಕೆ ಹಾಗೂ ಶಾಂತಿ ಕದಡುವ ಪ್ರಯತ್ನ ಮಾಡಿರುವುದಿಲ್ಲ. ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿಯೇ ಕುಮಾರಸ್ವಾಮಿ ರವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಇವರು ಈ ರೀತಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದು ಖಂಡನೀಯ. ಈ ಕೂಡಲೇ ರಾಜ್ಯದ ಜನತೆ ಮುಂದೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ಜೊತೆಗೆ ಕ್ಷೇತ್ರದಾದ್ಯಂತ ಚುನಾವಣಾ ಪ್ರಚಾರದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಅವಕಾಶ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ತಾಲೂಕ್ ಪಂಚಾಯತಿ ಮಾಜಿ ಅಧ್ಯಕ್ಷ ಸುರೇಶ ಮಾತನಾಡಿ ಕುಮಾರಸ್ವಾಮಿ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ಕೇಳಿಯೂ ಸಹ ರಾಜ್ಯದ ಜನತೆ ಮೌನ ವಹಿಸಿದ್ದಾರೆ. ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಬ್ಯಾಕ್ಲಾಗ ಹುದ್ದೆಗಳನ್ನು ಭರ್ತಿ ಮಾಡಲು ಮೀನಾ ಮೇಷ ಎಣಿಸಿದ್ದರು. ಇವರು ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು ಎಂದರು. ಮುಖಂಡ ಕಿರಣ್ ಮಾತನಾಡಿ ಡಿಎಸ್ ಪಕ್ಷವು ಪ್ರಣಾಳಿಕೆಯಲ್ಲಿ ಜಾತ್ಯಾತೀತ ತತ್ವಗಳನ್ನು ಅಳವಡಿಸಿಕೊಂಡಿದೆ ಎನ್ನುತ್ತಾರೆ ಆದರೆ ಅವರು ಮಾಡುವುದು ಮಾತ್ರ ಕೀಳು ಮಟ್ಟದ ರಾಜಕೀಯ. ಇದು ಮಾಜಿ ಮುಖ್ಯಮಂತ್ರಿಗಳ ಘನತೆಗೆ ಶೋಭೆ ತರುವಂತಹದ್ದಲ್ಲ ಈ ಕೂಡಲೇ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಕೆ ಹೊಸೂರು ಬಸವರಾಜು, ರಂಗೇಗೌಡ, ಪಾಳ್ಯ ಸಿದ್ದಪ್ಪಾಜಿ ನಾಯಕ, ಸಿಂಗನಲ್ಲೂರು ಚೆನ್ನೇಶ್ ಗೌಡ , ಚೇತನ್, ಪ್ರಣವ್ ಗೌತಮ್, ತೇಜು, ಬಸವರಾಜು, ರುದ್ರ, ಜಗದೀಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರುಗಳು ಹಾಜರಿದ್ದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…