Mysore
22
overcast clouds

Social Media

ಬುಧವಾರ, 29 ಜುಲೈ 2026
Light
Dark

ಎಚ್.ಮಂಜುನಾಥ್ ಮತ್ತೆ ಕಾಂಗ್ರೆಸ್ ಸೇರ್ಪಡೆ

ಪಾಂಡವಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್ ನೇತೃತ್ವದಲ್ಲಿ ಮಾಜಿ ಶಾಸಕ ಡಿ.ಹಲಗೇಗೌಡರ ಪುತ್ರ ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಅವರು ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಜಕ್ಕನಹಳ್ಳಿ ಗ್ರಾಮದಲ್ಲಿ ನಡೆದ ಭಾರತ್ ಐಕ್ಯತಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿ.ಕೆ.ಶಿವಕುವಾರ್, ವಾಜಿ ಸಚಿವ ಎನ್.ಚಲುವರಾಯಣಸ್ವಾಮಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಅವರ ತಂದೆ ವಾಜಿ ಶಾಸಕ ಡಿ.ಹಲಗೇಗೌಡರ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಎಚ್.ಮಂಜುನಾಥ್ ಒಮ್ಮೆ ಜಾ.ದಳಕ್ಕೆ ಹೋಗಿದ್ದರು. ಆ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಂಡರು. ಕಳೆದ ಚುನಾವಣೆಯ ಸಂದರ್ಭದಲ್ಲಿ ಮತ್ತೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದರು. ಎಚ್.ಮಂಜುನಾಥ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರೂ ಬಿಜೆಪಿುಂ ಯಾವುದೇ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳದೆ ತಟಸ್ಥವಾಗಿ ಬಿಜೆಪಿಯಿಂದ ದೂರವೇ ಉಳಿದಿದ್ದರು. ಕಳೆದ ನಾಲ್ಕು ವರ್ಷಗಳಿಂದಲೂ ರಾಜಕೀಯದಿಂದ ದೂರವೇ ಉಳಿದಿದ್ದ ಎಚ್.ಮಂಜುನಾಥ್ ಅವರು ಇದೀಗ ಮತ್ತೆ ತವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

 

 

 

 

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!