ಜಿಲ್ಲೆಗಳು

ಹುಣಸೂರು ಜಿಲ್ಲಾ ಕೇಂದ್ರವಾಗಬೇಕು: ಹೆಚ್.‌ ವಿಶ್ವನಾಥ್‌

ಮೈಸೂರು: ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆ ಮೂಲಕ ಬಡವರಿಗೆ ೨೧ ಲಕ್ಷ ಎಕರೆ ಭೂಮಿ ನೀಡಿ ಭೂ ಮಾಲೀಕರನ್ನಾಗಿ ವಾಡುವ ಮೂಲಕ ಅವರ ಬದುಕಿಗೆ ಆಸರೆಯಾದ ನಾಡಿನ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸರ ಹೆಸರಿನಲ್ಲಿ ಹುಣಸೂರು ಜಿಲ್ಲಾ ಕೇಂದ್ರವಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು.

ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಆರಸರ ಹೆಸರು ಅಜರಾಮರ. ಉಳುವವನೆ ಭೂಮಿ ಒಡೆಯ, ಜೀತ ವಿಮುಕ್ತಿ ಕಾಯ್ದೆ ಇನ್ನಿತರ ಸವಾಜಮುಖಿ ಯೋಜನೆಗಳನ್ನು ಜಾರಿಗೊಳಿಸಿ ದನಿ ಇಲ್ಲದ ಶೋಷಿತ ವರ್ಗದವರ ದನಿಯಾದ ಸಮಾನತೆಯ ಹರಿಕಾರ ಎಂದು ಹೇಳಿದರು.

ಹೀಗಾಗಿ ಅವರ ಹೆಸರಿನಲ್ಲಿ ಹುಣಸೂರನ್ನು ಅರಸು ಜಿಲ್ಲೆಯನ್ನಾಗಿ ಘೋಷಿಸುವಂತೆ ಸರ್ಕಾರದ ಗಮನ ಸೆಳೆಯಲು ಪಕ್ಷಾತೀತವಾಗಿ ಪ್ರಯತ್ನ ಹಾಕುತ್ತೇವೆ. ಹುಣಸೂರು, ಪಿರಿಯಾಪಟ್ಟಣ, ಕೆ.ಆರ್.ನಗರ, ಹೆಚ್.ಡಿ.ಕೋಟೆ, ಸರಗೂರು, ಸಾಲಿಗ್ರಾಮ ತಾಲ್ಲೂಕುಗಳನ್ನು ಒಳಗೊಂಡಂತೆ ಜಿಲ್ಲೆ ರಚನೆಯಾಗಬೇಕು ಎಂದು ಹೇಳಿದರು.

ಈ ಸಂಬಂಧ ನಾಲ್ಕು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಾಜಿ ಶಾಸಕರು, ಉದ್ಯಮಿಗಳು ಹೀಗೆ ಎಲ್ಲರೂ ಸೇರಿ ಜಿಲ್ಲೆಯ ರಚನೆಗೆ ಒತ್ತಡ ಹೇರುತ್ತೇವೆ. ಈ ಸಂಬಂಧ ಆದಷ್ಟು ಶೀಘ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಮನವೊಲಿಸಲಾಗುವುದು ಎಂದು ತಿಳಿಸಿದರು.

ಮೈಸೂರು ಜಿಲ್ಲಾಧಿಕಾರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಇಲ್ಲಿಗೆ ಕೇಂದ್ರ ಹಾಗೂ ರಾಜ್ಯದ ಮುಖಂಡರು ಭೇಟಿ ನಿಡುತ್ತಾರೆ. ಹೀಗಾಗಿ ತಾಲ್ಲೂಕು ಮಟ್ಟದಲ್ಲಿ ಕೆಲಸ ನಿರ್ವಹಿಸಲು ಅವರಿಂದ ಆಗುತ್ತಿಲ್ಲ. ಸರ್ಕಾರದ ಸವಲತ್ತುಗಳು ಸಾಮಾನ್ಯ ಜನರಿಗೆ ತಲುಪಲು ಹಾಗೂ ಸರ್ಕಾರದ ಕೆಲಸಗಳು ಸುಲಲಿತವಾಗಿ ನಡೆಯಲು ಅಧಿಕಾರ ವಿಕೇಂದ್ರೀಕರಣವಾಗಬೇಕು ಎಂದರು.

andolana

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

39 mins ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

43 mins ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

48 mins ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

52 mins ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

57 mins ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

1 hour ago