ಕೊಡಗು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಹಾಲಿ ಬಿಜೆಪಿಯಿಂದ ಸದಸ್ಯರಾಗಿರುವ ಎಚ್. ವಿಶ್ವನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹರ ವಿರುದ್ಧ ಸ್ಪರ್ಧಿಸಲು ಸಿದ್ದತೆ ಮಾಡಿಕೊಂಡಿದ್ದಾರೆ.
ಫೆ.6 ರಂದು ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾನು ಒಟ್ಟಿಗೆ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದು, ಈಗಿನ ಉಪಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರೊಡನೆ ಯೂತ್ ಕಾಂಗ್ರೆಸ್ ನಿಂದಲೂ ಒಟ್ಟಿಗೆ ಕೆಲಸ ಮಾಡಿದ್ದೇನೆ. ಕಾಂಗ್ರೆಸ್‌ನ ಹಿರಿಯ ನಾಯಕರು ಚಿರಪರಿಚಿತರಾಗಿದ್ದಾರೆ. ಖರ್ಗೆ ಸಾಹೇಬರು ನಮ್ಮನ್ನೆಲ್ಲ ಪ್ರೊತ್ಸಾಹಿಸಿ ಬೆಳೆಸಿದವರು ಹಾಗಾಗಿ ಪ್ರಬಲ ಆಕಾಂಕ್ಷಿಯಾಗಿ ಟಿಕೆಟ್‌ಗೆ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು.





