ಜಿಲ್ಲೆಗಳು

ಹನೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹನೂರು ಕ್ಷೇತ್ರದಲ್ಲಿ 9 ಸಮುದಾಯ ಭವನ ಮಂಜೂರು : ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಹನೂರು: ಕಳೆದ 3 ವರ್ಷಗಳಲ್ಲಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 9 ಸಮುದಾಯ ಭವನ ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬೆಂಗಳೂರಿನ ವಿಧಾನಸಭೆ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್ ನರೇಂದ್ರ ಅವರ ಪ್ರಶ್ನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿ ಕಳೆದ 3ವರ್ಷಗಳಲ್ಲಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ 9ಸಮುದಾಯ ಭವನಗಳುಹಾಗೂ ವಿದ್ಯಾರ್ಥಿ ನಿಲಯಗಳು ಮಂಜೂರಾಗಿದ್ದು ಎಲ್ಲ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದೆ,ಅಪೂರ್ಣಗೊಂಡ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಈಗಾಗಲೆ ಬಿಡುಗಡೆಯಾಗಿರುವ ಮೊದಲನೇ ಹಾಗೂ ಎರಡನೇ ಕಂತಿನ ಅನುದಾನಕ್ಕೆ ಸಂಬಂಧಪಟ್ಟ ಸಂಘ ಸಂಸ್ಥೆ ಹಾಗೂ ಟ್ರಸ್ಟ್ ಹಣ ಬಳಕೆ ಪ್ರಮಾಣ ಮತ್ತು ಕಟ್ಟಡ ನಿರ್ಮಾಣದ ಪ್ರಗತಿ ವರದಿ ಸಲ್ಲಿಕೆಯಾದ ನಂತರ ಸದರಿ ಕಾರ್ಯಕ್ರಮದಡಿ ಲಭ್ಯವಿರುವ ಅನುದಾನ ಹಾಗೂ ರಾಜ್ಯದ ಒಟ್ಟಾರೆ ಬೇಡಿಕೆಯನ್ನಾಧರಿಸಿ ಉಳಿಕೆ ಅನುದಾನವನ್ನು ಬಿಡುಗಡೆ ಗೊಳಿಸಿಅಪೂರ್ಣಗೊಂಡ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 hour ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

2 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

2 hours ago