ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ, ಜೆಡಿಎಸ್, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪಾದಯಾತ್ರೆ ಹಮ್ಮಿಕೊಂಡಿದ್ದರು.
ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಜಮಾಯಿಸಿದ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಈ ಪ್ರತಿಭಟನೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಸಹ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಮೂಲಕ ತಮ್ಮ ಮಾತನ್ನು ಆರಂಭಿಸಿದರು.
ಹನುಮ ಧ್ವಜ ತೆರವುಗೊಳಿಸಿದ್ದರ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹಾಗೂ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ವೇಳೆ ಒಬ್ಬನ ಕಣ್ಣಿಗೆ ತೀವ್ರ ಏಟು ಬಿದ್ದಿದೆ. ಕಣ್ಣು ಹೋಗಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಣ್ಣು ತಂದು ಕೊಡುತ್ತಿದ್ರಾ? ಪೊಲೀಸರೇ ಎಚ್ಚರವಾಗಿರಿ. ಇನ್ನೆಷ್ಟು ದಿನ ನಿಮ್ಮ ಆಟ ನಡೆಯುತ್ತದೆಯೋ ನಾನೂ ನೋಡುತ್ತೇನೆ. ಯಾವನೋ ಹೇಳುತ್ತಾನೆ ಅಂತ ಹೇಗೆ ಬೇಕೋ ಹಾಗೆ ಕೆಲಸ ಮಾಡುವುದನ್ನು ನಾನು ಒಪ್ಪಲಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.
ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಸರ್ಕಾರವೇ ಕಾರಣವಾಗಿದೆ. ಮೊದಲು ಜಿಲ್ಲಾಧಿಕಾರಿಯನ್ನು ಅಮಾನತು ಮಾಡಿ ಹೊರಗೆ ಕಳುಹಿಸಿ. ಆ ಘಟನೆಗೆಲ್ಲಾ ಮಂಡ್ಯ ಜಿಲ್ಲಾಧಿಕಾರಿಯೇ ಕಾರಣ. ಹನುಮಂತನನ್ನು ಕೆಣಕಿದ್ದಕ್ಕೆ ಲಂಕಾದಹನವಾಯಿತು. ಅದೇ ರೀತಿ ನಿಮ್ಮ ಅವನತಿ ಆಗುತ್ತದೆ. ಸಿದ್ದರಾಮಯ್ಯನವರೇ ಹೆಸರಿನಲ್ಲಿ ರಾಮ ಇದ್ದರೆ ಸಾಲದು. ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು. ಇಲ್ಲಿ ನಡೆದ ಲಾಠಿ ಚಾರ್ಜ್ ಸರ್ಕಾರದ ರಾಕ್ಷಸ ಪ್ರವೃತ್ತಿಯನ್ನು ಘೋಷಿಸುತ್ತದೆ. ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ. ನಿಮ್ಮ ತಪ್ಪನ್ನು ತಿದ್ದುಕೊಳ್ಳಿ. ರಾಜಕೀಯ ಮಾಡಿದ್ದು ನೀವು. ಅಧಿಕಾರದ ಅಮಲಿನಲ್ಲಿ ದೈಹಿಕ ಹಲ್ಲೆ ಮಾಡಿಸಿದ್ದೀರಿ. ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವ ಪ್ರಶ್ನೆ ಇಲ್ಲ. ನಮ್ಮ ಕಾರ್ಯಕರ್ತರಿಗೆ ದೈಹಿಕವಾಗಿ ಪೆಟ್ಟು ಕೊಟ್ಟಿದ್ದೀರಿ. ಇದಕ್ಕಾಗಿ ಅಧಿಕಾರಿಗಳಿಗೆ ಪ್ರಾಯಶ್ಚಿತವಾಗಲೇಬೇಕು ಎಂದು ಕುಮಾರಸ್ವಾಮಿ ಹೇಳಿದರು.
ಇದು ರಾಜಕೀಯ ಲಾಭ ಅಥವಾ ನಷ್ಟದ ಹೋರಾಟವಲ್ಲ. ಧ್ವಜ ಸ್ತಂಭ ವಿಚಾರದಲ್ಲಿ ಸುಳ್ಳು ದಾಖಲೆ ಸೃಷ್ಟಿಯಾಗಿದೆ. ಅಧಿಕಾರಿಗಳನ್ನು ಬಳಸಿಕೊಂಡು ಉದ್ಧಟತನ ತೋರಿಸುತ್ತಿದ್ದಾರೆ. ಅಧಿಕಾರಿಗಳು ತಕ್ಷಣ ಕೆರಗೋಡಿನಲ್ಲಿ ಶಾಂತಿ ಸಭೆ ಕರೆಯಬೇಕು. ಧ್ವಜದ ಮರುಸ್ಥಾಪನೆಯಾಗಬೇಕು, ಅಲ್ಲಿಯವರೆಗೂ ನಮ್ಮ ಹೋರಾಟವಿರುತ್ತದೆ. 144 ಸೆಕ್ಷನ್ ಮೊದಲು ಕಿತ್ತುಹಾಕಿ. ಜನರು ಕೆರಳಿದರೆ ಪೊಲೀಸರಿಂದ ತಡೆಯಲು ಆಗುವುದಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…