ಜಿಲ್ಲೆಗಳು

ಹನುಮ ಜಯಂತಿ ಆಚರಣೆ : 3 ದಿನ ಮದ್ಯ ಮಾರಾಟಕ್ಕೆ ಬ್ರೇಕ್

ಮೈಸೂರು: ಹನುಮ ಜಯಂತಿ ಆಚರಣೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಹುಣಸೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಲಾಗಿದೆ. ಜತೆಗೆ ಒಂದು ದಿನ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹನುಮ ಜಯಂತಿ ಶೋಭಾಯಾತ್ರೆಯ ಸಾಗುವ ಮಾರ್ಗಗಳನ್ನು ಎಸ್​ಪಿ ಆರ್‌. ಚೇತನ್‌ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಪಥ ಸಂಚಲನ ಮಾಡಲಾಗಿದೆ. ಶಾಂತಿಯುತವಾಗಿ ಹನುಮ ಜಯಂತಿ ಆಚರಿಸಲು ಅಗತ್ಯ ಕ್ರಮ‌ ಕೈಗೊಳ್ಳಲಾಗಿದೆ.ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದೆ. ಕಾನೂನು ಸುವ್ಯವಸ್ಥೆಗಾಗಿ 1,700 ಮಂದಿ ಪೊಲೀಸರು, 9 ಡಿಎಆರ್‌, 8 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಕಂಟ್ರೋಲ್‌ ರೂಂ ಮೂಲಕ ನಿಯಂತ್ರಣ ಮಾಡಲಾಗುತ್ತಿದೆ.
ಬೆಳಗ್ಗೆ 11 ರಿಂದ ಸಂಜೆ 5ರವರೆಗೆ ಜೆಎಲ್‌ಬಿ, ಬಜಾರ್‌ ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟ ನಿಷೇಧಿಸಲಾಗಿದೆ. ಅನುಮತಿ ಪಡೆದ ವಾಹನಗಳಿಗೆ ಮಾತ್ರ ಮೆರವಣಿಗೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ವಾಹನಗಳ ಮೇಲೆ ಹತ್ತುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಡಿಜೆ ಬಳಕೆಗೆ ಅವಕಾಶ ನಿರಾಕರಿಸಲಾಗಿದೆ. ಸಂಜೆ 5ರವರೆಗೆ ಮಾತ್ರ ಮೆರವಣಿಗೆಗೆ ಅವಕಾಶ ಕಲ್ಪಿಸಲಾಗಿದೆ. ಮೆರವಣಿಗೆ ಸಾಗುವ ಎಲ್ಲಾ ಮಾರ್ಗಗಳ ಪರಿಶೀಲನೆ ಮಾಡಲಾಗಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಮಂದಿ ಆರೋಪಿತರ ಪಟ್ಟಿ ಸಿದ್ಧಪಡಿಸಿ ಅವರ ಚಲನವಲನದ ಮೇಲೆ ಒಬ್ಬರಿಗೆ ಒಬ್ಬ ಪೊಲೀಸರು ನಿಗಾ ವಹಿಸಿದ್ದಾರೆ. ನಗರ ಪ್ರವೇಶಿಸುವ 6 ಕಡೆ, ಜಿಲ್ಲೆಯ ಎರಡು ಕಡೆ, ಜಿಲ್ಲೆಯ ಎರಡು ಕಡೆಯಲ್ಲಿ ಚೆಕ್‌ಪೋಸ್ಟ್‌ ಮಾಡಲಾಗಿದೆ.

ಸಾರ್ವಜನಿಕರು ಏನೇ ದೂರುಗಳಿದ್ದರೂ ಸಹಾಯ ವಾಣಿ 112ಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ನಗರಸಭೆಯ ಅನುಮತಿಯೊಂದಿಗೆ ನಿಗದಿತ ಸ್ಥಳದಲ್ಲಿ ಮಾತ್ರ ಬಾವುಟ, ಫ್ಲೆಕ್ಸ್‌ ಅಳವಡಿಕೆಗೆ ಅವಕಾಶ ನೀಡಲಾಗಿದೆ.

 

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

53 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago