Mysore
24
haze

Social Media

ಗುರುವಾರ, 25 ಡಿಸೆಂಬರ್ 2025
Light
Dark

ಹನುಮ ಧ್ವಜ ವಿವಾದ: ಕೆರಗೋಡು ಪಿಡಿಒ ಅಮಾನತು

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮದ ಪಿಡಿಒ ಬಿ.ಎಂ. ಜೀವನ್‌ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಒ ತನ್ವೀರ್‌ ಆಶೀಫ್‌ ಸೇಠ್‌ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಈ ಕೆಳಕಂಡ ಐದು ಕಾರಣಗಳನ್ನು ನೀಡಿ ಅಮಾನತು ಮಾಡಲಾಗಿದೆ.

  1. ಗ್ರಾಮ ಪಂಚಾಯಿತಿ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯ. ಆದ್ರೆ, ಸದರಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಿರುವುದು.
    2. ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಕರ್ತವ್ಯ ಲೋಪ.
    3. ಧ್ವಜ ಸ್ತಂಭದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲು ಅನುಮತಿ ನೀಡಿ, ಷರತ್ತು ಉಲ್ಲಂಘಿಸಿದ್ರು ಕ್ರಮಕೈಗೊಳ್ಳದೆ ನಿರ್ಲಕ್ಷ.
    4. ರಾಷ್ಟ್ರ ಧ್ವಜದ ಬದಲು ಹನುಮ ಧ್ವಜ‌ ಹಾರಿಸಲು ಅವಕಾಶ ನೀಡಿರುವುದು.
    5. ಹನುಮ‌ ಧ್ವಜ‌ಹಾರಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು.
Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!