ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು(35) ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಘಟನೆ ವಿವರ : ನಾಲ್ ರೋಡ್ ಗ್ರಾಮದಿಂದ ಮಾಟಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಸಿಗುವ ಚೆಕ್ ಡ್ಯಾಮ್ ನಲ್ಲಿ ಮೃತ ಮದಲೈ ಮುತ್ತು ಪ್ರತಿದಿನ ಮೀನು ಹಿಡಿಯಲು ತೆರಳುತ್ತಿದ್ದರು ಎನ್ನಲಾಗಿದೆ. ಇಂದು ಸಹ ಮೀನು ಹಿಡಿಯಲು ಬಲೆ ಹಾಕುವ ವೇಳೆ ಮೂರ್ಚೆ ತಪ್ಪಿ ನೀರಿನಲ್ಲಿ ಮುಳುಗಿದ್ದಾರೆ. ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ರಾಮಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…