ಹನೂರು: ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರಿಂದ ಅಯ್ಯಪ್ಪ ಸ್ವಾಮಿ ಉತ್ಸವ ಕಾರ್ಯಕ್ರಮ ವಿಧಿ ವಿಧಾನಗಳೊಂದಿಗೆ ಜರುಗಿತು.
ಇದೇ ಸಂದರ್ಭದಲ್ಲಿ ಗುರುಸ್ವಾಮಿ ಕಾಂತರಾಜು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಕಳೆದ 2 ವರ್ಷ ದೇಶಾದ್ಯಂತ ಕರೋನ ಮಹಾಮಾರಿ ವ್ಯಾಪಿಸಿದ್ದ ಹಿನ್ನೆಲೆ ಪ್ರವಾಸ ಸ್ಥಗಿತಗೊಳಿಸಲಾಗಿತ್ತು. ಇದೀಗ ಕರೋನಾ ಮಹಾಮಾರಿ ಕಡಿಮೆಯಾಗಿರುವುದರಿಂದ ಮತ್ತೆ ಶಬರಿಮಲೆ ಯಾತ್ರಾ ಪ್ರವಾಸ ಕೈಗೊಂಡಿದ್ದೇವೆ. ಗ್ರಾಮದಲ್ಲಿ ಉತ್ತಮ ಮಳೆ,ಬೆಳೆಯಾಗಿ ಜನತೆ ಸದಾ ಸಮೃದ್ಧಿಯಾಗಿರಲಿ ಎಂದು ಪ್ರತಿವರ್ಷ ವಿಶೇಷ ಪೂಜೆ ಮಾಡುತ್ತಿದ್ದೇವೆ .ಅದರಂತೆ ಈ ವರ್ಷವೂ ಸಹ ಶಬರಿಮಲೆ ಅಯ್ಯಪ್ಪ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ಸವ ಮುಗಿದ ನಂತರ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…