ಜಿಲ್ಲೆಗಳು

ಹನೂರು: ದೇಶವಾಸಿಗಳು ಹಕ್ಕು, ಕರ್ತವ್ಯಗಳ ಪಾಲನೆ ಮಾಡಬೇಕು: ತಹಸಿಲ್ದಾರ್ ಧನಂಜಯ್

ಹನೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕರಡು ಸಮಿತಿ ಅಧ್ಯಕ್ಷತೆಯಲ್ಲಿ ರಚನೆಗೊಂಡ ಭಾರತದ ಸಂವಿಧಾನ ಆಶಯಗಳಿಗನುಗುಣವಾಗಿ ದೇಶವಾಸಿಗಳು ಹಕ್ಕು ಮತ್ತು ಕರ್ತವ್ಯಗಳನ್ನು ಪಾಲನೆ ಮಾಡಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಮಾತನಾಡಿದರು.

ಭಾರತದ ಸಂವಿಧಾನ ವಿಶ್ವದ ಅತ್ಯಂತ ಬೃಹತ್ ಲಿಖಿತ ರೂಪದ ಸಂವಿಧಾನವಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ 1949 ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು.

ಸ್ವಾತಂತ್ರ್ಯದ ಬಳಿಕ ರಾಜಪ್ರಭುತ್ವ ವ್ಯವಸ್ಥೆಯ ಬದಲಿಗೆ ಸಂವಿಧಾನದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ ಬರೆದ 1949 ನವಂಬರ್ 26 ದೇಶದ ಪ್ರಜೆಗಳ ಪಾಲಿಗೆ ಸುದಿನವಾಗಿದೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಮುಂತಾದ ಮೌಲ್ಯಯುತ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶಕ್ಕೆ ವಿಶ್ವವೇ ಮೆಚ್ಚುವ ಮತ್ತು ಮಾದರಿಯಾಗುವ ಸಂವಿಧಾನವನ್ನು ನೀಡಲು ಹಗಲಿರುಳು ಶ್ರಮಿಸಿದ ಮಹನೀಯರನ್ನು ಸ್ಮರಿಸಬೇಕು. ಪ್ರತಿಯೊಬ್ಬ ಅಧಿಕಾರಿ, ಜನಪ್ರತಿನಿಧಿಗಳು ಸೇರಿದಂತೆ ನಾಗರಿಕರು ಸಂವಿಧಾನದಡಿ ಕರ್ತವ ಮತ್ತು ಜೀವನ ಸಾಗಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಆಶಯಗಳ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಬಳಿಕ ಪಟ್ಟಣದ ಪೊಲೀಸ್ ಠಾಣ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಬೃಹತ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಈ ಸಂದರ್ಭದಲ್ಲಿ ಉಪತಹಸಿಲ್ದಾರ್ ಸುರೇಖಾ, ಶಿರೆಸ್ತೇದಾರ ನಾಗೇಂದ್ರ, ಆರ್.ಐ.ಮಹದೇವಸ್ವಾಮಿ, ಗ್ರಾಮಲೆಕ್ಕಿಗ ಶೇಷಣ್ಣ, ಕುಮಾರ, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿವಿಧಡೆ ಆಚರಣೆ: ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಗಲಿಟ್ಟ ನವಂಬರ್ 26 ರಂದು ದೇಶಕ್ಕೆ ಸಂವಿಧಾನ ಸಮರ್ಪಿಸಿದ ದಿನದ ಅಂಗವಾಗಿ ತಾಲೂಕಿನ ವಿವಿಧಡೆ ಶಾಲಾ ಕಾಲೇಜು, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಹಾಗೂ ಸರ್ಕಾರೇತರ ಕಚೇರಿಗಳು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ದಿವಸವನ್ನು ಆಚರಿಸಲಾಯಿತು.

andolana

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

15 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

15 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

22 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

22 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

22 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

22 hours ago