ಜಿಲ್ಲೆಗಳು

ಹನೂರು ಕ್ಷೇತ್ರ ಸಮಗ್ರ ಅಭಿವೃದ್ಧಿಯಾಗಿದ್ದು ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ : ಆರ್‌ ನರೇಂದ್ರ

ಹನೂರು :ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್ ಆಂಜನೇಯ ರವರು ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ನೀಡಿದ್ದರು ಎಂದು ಶಾಸಕರಾದ ಆರ್ ನರೇಂದ್ರ ತಿಳಿಸಿದರು.

ತಾಲೂಕಿನ ಜೀರಿಗೆಗದ್ದೆ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ ಮಾಡಿ ಅವರು ಮಾತನಾಡಿದರು.ಇಂದಿನ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಆಂಜನೇಯ ರವರು ನೂತನ ವರ್ಷ ಆಚರಣೆಗೆ ಹನೂರು ಕ್ಷೇತ್ರಕ್ಕೆ ಬರುತ್ತೇನೆ ಎಂದು ತಿಳಿಸಿದಾಗ, ನೀವು ಸುಮ್ಮನೆ ಕ್ಷೇತ್ರಕ್ಕೆ ಬರುವುದೇ ಬೇಡ ಹನೂರು ಕ್ಷೇತ್ರದ ಜನತೆಗೆ ಒಳಿತಾಗುವ ನಿಟ್ಟಿನಲ್ಲಿ ಅನುದಾನ ನೀಡಿ ಈ ಭಾಗದ ಜನರಿಗೆ ಖುಷಿಪಡಿಸಿ ನೀವು ಸಹ ಹೊಸ ವರ್ಷ ಆಚರಣೆ ಮಾಡಿ ಎಂದು ತಿಳಿಸಿದ್ದೆ. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಆದಿವಾಸಿ ಹಾಡಿಗಳ ಸಮಗ್ರ ಅಭಿವೃದ್ಧಿಗೆ 10 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಅದರಂತೆ ಅನುದಾನ ಮಂಜೂರು ಮಾಡಿದರು. ಈ ಅನುದಾನದಲ್ಲಿ ಹಾಡಿಗಳಿಗೆ ಸಿಸಿ ರಸ್ತೆ, ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿಗಳನ್ನು ಮಾಡಲಾಗಿದೆ. ಸೇತುವೆ ವ್ಯಾಪ್ತಿಯ 82 ಹಾಡಿಗಳ 1800 ಜನರಿಗೆ 3250 ಎಕರೆ ಅರಣ್ಯ ಹಕ್ಕು ಕಾಯ್ದೆ ಅಡಿ ಸಾಗುವಳಿ ಪತ್ರ ನೀಡಲಾಗಿದೆ. ಇವರಿಗೆ ಗಂಗಾ ಕಲ್ಯಾಣ ಯೋಜನೆ ಅಡಿ ಬೋರ್ವೆಲ್ ಕೊರಸಿ ಉಚಿತ ರಸಗೊಬ್ಬರಗಳನ್ನು ಕೊಡಿಸಿ ಇವರನ್ನು ಆರ್ಥಿಕವಾಗಿ ಮುಂದೆ ಬರಲು ನಮ್ಮ ಸರ್ಕಾರ ಕ್ರಮ ಕೈಗೊಂಡಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

35 ಸಾವಿರ ಉಚಿತ ಗ್ಯಾಸ್ ವಿತರಣೆ : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 35,000 ಜನರಿಗೆ ಉಚಿತ ಗ್ಯಾಸ್ ಸಂಪರ್ಕ ಹಾಗೂ ವರ್ಷಕ್ಕೆ ಎರಡು ಸಿಲಿಂಡರ್ ವಿತರಣೆ ಮಾಡಲಾಗಿತ್ತು ಆದರೆ ಕೇಂದ್ರ ಸರ್ಕಾರ ಗ್ಯಾಸ್ ಬೆಲೆ ಏರಿಕೆ ಮಾಡಿರುವುದರಿಂದ ಹಾಡಿಗಳಲ್ಲಿ ಸಿಲಿಂಡರ್ ಗಳನ್ನು ಚೇರ್ ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಹೊದಿಕೆ ಹಾಗೂ ಸೀರೆಗಳಿಗೆ ಮರುಳಾಗಬೇಡಿ : ದಿವಂಗತ ರಾಜು ಗೌಡರ ಕಾಲದಿಂದಲೂ ನಮ್ಮ ಮನೆತನ ಆದಿವಾಸಿಗಳ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತಿದೆ. ನಾನು ಸಹ ಕಳೆದ 14 ವರ್ಷಗಳಿಂದ ನಿಮ್ಮ ಕಷ್ಟ ಸುಖಗಳಿಗೆ ಧನಿಯಾಗಿದ್ದೇನೆ ಇಂದು ಯಾರೋ ಹೊರಗಿನವರು ಬಂದು ನೀಡುವ 25 ರೂ ಹೊದಿಕೆ ಹಾಗೂ 80 ರೂ ಸೀರೆಗಳಿಗೆ ಮರುಳಾಗಬೇಡಿ. ನೀವು ಸ್ವಾಭಿಮಾನಿಗಳು ನಿಮ್ಮ ಅಭಿವೃದ್ಧಿಗೆ ಸ್ಪಂದಿಸುವ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಕಳೆದ ಐವತ್ತು ವರ್ಷಗಳಿಂದ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದೇವೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಹತ್ತಾರು ಆಶ್ರಮ ಶಾಲೆಗಳು, ವಸತಿ ಶಾಲೆಗಳು,ಸರ್ಕಾರಿ ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಶೈಕ್ಷಣಿಕವಾಗಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದ್ದೇವೆ ಬೇರೆಯವರು ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ : ಕ್ಷೇತ್ರ ವ್ಯಾಪ್ತಿಯ ಲೋಕನಹಳ್ಳಿ 15 ಲಕ್ಷ, ಜೀರಿಗೆ ಗದ್ದೆ 10 ಲಕ್ಷ ಉದ್ದಟ್ಟಿ 10 ಲಕ್ಷ, ಮಾವತ್ತೂರು 10 ಲಕ್ಷ ಹಿರಿಯಂಬಲ 20 ಲಕ್ಷ ಬೂದಿಪಡಗ 15ಲಕ್ಷ ಸೇರಿದಂತೆ ಕೌಳಿ ಹಳ್ಳ ಡ್ಯಾಮ್ 5 ಲಕ್ಷ ದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಒಂದು ಕೋಟಿ 25 ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಹಾಗೂ ಉದ್ದಟ್ಟಿ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ವಾಲ್ಮೀಕಿ ಸಮುದಾಯ ಭವನಗಳನ್ನು ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಮಾಜಿ ಸದಸ್ಯ ಕೊಪ್ಪಳಿ ಮಹದೇವ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯ ಪುಟ್ವೀರ್ ನಾಯ್ಕ, ಮುಖಂಡರುಗಳಾದ ಮಂಗಲ ಪುಟ್ಟರಾಜು ಲೋಕನಹಳ್ಳಿ ಜಗದೀಶ್, ವಿಷ್ಣು ಕುಮಾರ್ ಸಿದ್ದರಾಜು, ವಿನಯ್ ಕೆಂಪರಾಜು ಚಂದ್ರು ಮಹದೇವ ಕಂಡಯ್ಯನಪಾಳ್ಯ ಮಾದೇಶ್, ಚಿಕ್ಕಬಳ್ಳಾಪುರ ಅಂಕರಾಜು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್ ಯುವ ಮುಖಂಡ ವಿನೋದ್ ಸತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago