ಹನೂರು: ಶವ ಸಂಸ್ಕಾರ ನೆರವೇರಿಸಲು ಸ್ಮಶಾನ ವ್ಯವಸ್ಥೆ ಇಲ್ಲದ್ದರಿಂದ ಮೃತಪಟ್ಟ ಮಹಿಳೆಯ ಶವವನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಹನೂರು ತಾಲ್ಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಮಲಮ್ಮ ಎಂಬವರು ಗುರುವಾರ ನಿಧನರಾಗಿದ್ದರು. ಆದರೆ ಸ್ಮಶಾನ ಇಲ್ಲದ ಪರಿಣಾಮ ಶವ ಸಂಸ್ಕಾರ ನೆರವೇರಿಸಲು ತೊಂದರೆಯಾಗಿತ್ತು. ಈ ಹಿಂದೆ ಅಕ್ಟೋಬರ್‌ನಲ್ಲಿ ಮೃತಪಟ್ಟ ಪುಟ್ಟರಾಜಶೆಟ್ಟಿ ಎಂಬವರನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಗ್ರಾಮದಲ್ಲಿ ಸ್ಮಶಾನ ಇಲ್ಲದ ಬಗ್ಗೆ ಗ್ರಾಮಸ್ಥರು ಆಕ್ರೋಶ ಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ, ಗ್ರಾಮಕ್ಕೆ ಸ್ಮಶಾನ ಕಲ್ಪಿಸುವಂತೆ ಹಿಂದೆಯೇ ಮನವಿ ಸಲ್ಲಿಸಿದ್ದು, ಡಿಸಿ ಅವರು ಮಂಜೂರು ಮಾಡುವಂತೆ ಸೂಚಿಸಿದ್ದರೂ ಸ್ಮಶಾನ ವ್ಯವಸ್ಥೆ ಕಲ್ಪಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಂತ್ಯಸಂಸ್ಕಾರಕ್ಕೆ ಜಾಗದ ವ್ಯವಸ್ಥೆ ಮಾಡಿಕೊಡಬೇಕು. ಜತೆಗೆ ಸ್ಮಶಾನ ಮಂಜೂರು ಮಾಡಬೇಕು. ಇಲ್ಲವಾದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನ ಬಹಿಷ್ಕರಿಸಲಾಗುವುದು ಎಂದು ತಿಳಿಸಿದರು.
ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ತಹಸಿಲ್ದಾರ್ ಅನಂದಯ್ಯ ಅವರು ಸ್ಮಶಾನಕ್ಕಾಗಿ ಗುರ್ತಿಸಿರುವ ಜಾಗವನ್ನು ಅಳತೆ ಮಾಡಿ, ಬಳಿಕ ಸ್ಮಶಾನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ನಂತರ ಮಹಿಳೆಯ ಅಂತ್ಯಸಂಸ್ಕಾರವನ್ನು ಖಾಸಗಿ ಜಮೀನಿನಲ್ಲಿ ನೆರವೇರಿಸಲಾಯಿತು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.