ಜಿಲ್ಲೆಗಳು

ಹನೂರು : ಸ್ಮಶಾನವಿಲ್ಲದೆ ಖಾಸಗಿ ಜಮೀನಿನಲ್ಲಿ ಅಂತ್ಯಸಂಸ್ಕಾರ

ಹನೂರು: ಶವ ಸಂಸ್ಕಾರ ನೆರವೇರಿಸಲು ಸ್ಮಶಾನ ವ್ಯವಸ್ಥೆ ಇಲ್ಲದ್ದರಿಂದ ಮೃತಪಟ್ಟ ಮಹಿಳೆಯ ಶವವನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಹನೂರು ತಾಲ್ಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಮಲಮ್ಮ ಎಂಬವರು ಗುರುವಾರ ನಿಧನರಾಗಿದ್ದರು. ಆದರೆ ಸ್ಮಶಾನ ಇಲ್ಲದ ಪರಿಣಾಮ ಶವ ಸಂಸ್ಕಾರ ನೆರವೇರಿಸಲು ತೊಂದರೆಯಾಗಿತ್ತು. ಈ ಹಿಂದೆ ಅಕ್ಟೋಬರ್‌ನಲ್ಲಿ ಮೃತಪಟ್ಟ ಪುಟ್ಟರಾಜಶೆಟ್ಟಿ ಎಂಬವರನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಗ್ರಾಮದಲ್ಲಿ ಸ್ಮಶಾನ ಇಲ್ಲದ ಬಗ್ಗೆ ಗ್ರಾಮಸ್ಥರು ಆಕ್ರೋಶ ಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ, ಗ್ರಾಮಕ್ಕೆ ಸ್ಮಶಾನ ಕಲ್ಪಿಸುವಂತೆ ಹಿಂದೆಯೇ ಮನವಿ ಸಲ್ಲಿಸಿದ್ದು, ಡಿಸಿ ಅವರು ಮಂಜೂರು ಮಾಡುವಂತೆ ಸೂಚಿಸಿದ್ದರೂ ಸ್ಮಶಾನ ವ್ಯವಸ್ಥೆ ಕಲ್ಪಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಂತ್ಯಸಂಸ್ಕಾರಕ್ಕೆ ಜಾಗದ ವ್ಯವಸ್ಥೆ ಮಾಡಿಕೊಡಬೇಕು. ಜತೆಗೆ ಸ್ಮಶಾನ ಮಂಜೂರು ಮಾಡಬೇಕು. ಇಲ್ಲವಾದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನ ಬಹಿಷ್ಕರಿಸಲಾಗುವುದು ಎಂದು ತಿಳಿಸಿದರು.
ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ತಹಸಿಲ್ದಾರ್ ಅನಂದಯ್ಯ ಅವರು ಸ್ಮಶಾನಕ್ಕಾಗಿ ಗುರ್ತಿಸಿರುವ ಜಾಗವನ್ನು ಅಳತೆ ಮಾಡಿ, ಬಳಿಕ ಸ್ಮಶಾನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ನಂತರ ಮಹಿಳೆಯ ಅಂತ್ಯಸಂಸ್ಕಾರವನ್ನು ಖಾಸಗಿ ಜಮೀನಿನಲ್ಲಿ ನೆರವೇರಿಸಲಾಯಿತು.

andolanait

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

56 mins ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

60 mins ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

1 hour ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

1 hour ago