ಜಿಲ್ಲೆಗಳು

ಹನೂರು: ಸಾರ್ವಜನಿಕರ ಕುಂದು ಕೊರತೆ, ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್

ಹನೂರು: ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಿ. ಎಸ್. ರಮೇಶ್ ರವರು ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಿ. ಗುಂಡಾಪುರ ಗ್ರಾಮದ ಹೊಂಗಯ್ಯ ಎಂಬುವರು ತಮ್ಮ ಜಮೀನಿನಲ್ಲಿ ಕಾಡು ಮರಗಳು ಬೆಳೆದಿವೆ. ಬೆಳೆದಿರುವ ಮರಗಳನ್ನು ಕಟಾವು ಮಾಡಲು ಅರಣ್ಯ ಇಲಾಖೆಯವರು ಎರಡು ತಿಂಗಳಾಗಿದ್ದರು ಅನುಮತಿ ನೀಡಿಲ್ಲ ಎಂದು ದೂರಿದರು.

ಕೆಶಿಪ್ ರಸ್ತೆ ಅಭಿವೃದ್ಧಿ ಸಂಬಂಧ ಕಾಮಗೆರೆ ಮುಖ್ಯರಸ್ತೆಯಲ್ಲಿನ ಕೆಲವು ಬಾಡಿಗೆದಾರರಿಗೆ ಮಾತ್ರ ಪರಿಹಾರ ನೀಡಿದ್ದಾರೆ. 56 ಜನರ ಪೈಕಿ 20 ಜನರಿಗೆ ಪರಿಹಾರ ನೀಡುವ ಕ್ರಮದಿಂದ ಹೆಸರನ್ನು ಕೈ ಬಿಡಲಾಗಿದೆ ಎಂದು ದೂರಿದರು. ತಕ್ಷಣ ಉಪವಿಭಾಗಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

ನಾಗಣ್ಣ ನಗರ ಗ್ರಾಮಕ್ಕೆ ಸರ್ಕಾರದಿಂದ 250 ಎಕರೆ ಜಮೀನು ಮಂಜೂರು ಮಾಡಲಾಗಿದ್ದು, ಅನುಭವ ಸ್ವಾಧಿನ ಬೇರೆ ಇದೆ ಎಂದು ಗ್ರಾಮದ ಮುಖಂಡರೊಬ್ಬರು ತಮ್ಮ ಅಳಲು ತೋಡಿಕೊಂಡರು.

ಕುಮಾರ ದೊರೆ ಎಂಬವವರು ಒಡೆಯರ ಪಾಳ್ಯ ಕೆರೆ ಒತ್ತುವರಿಯನ್ನು ತೆರೆವುಗೊಳಿಸುವ ಸಂಬಂಧ ಮನವಿ ಸಲ್ಲಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಹಾಗೂ ಸರ್ವೇ ಇಲಾಖೆಯವರಿಂದ ಮಾಹಿತಿ ಪಡೆದು ಸಂಬಂಧಪಟ್ಟ ತಾಲ್ಲೂಕು ಪಂಚಾಯತಿ ಅಧಿಕಾರಿಯವರನ್ನು ಕರೆಯಿಸಿ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಕಳೆದ 2 ವರ್ಷಗಳ ಹಿಂದೆ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ನೀಡಲಾಗಿರುವ ಪರಿಹಾರವನ್ನು ಫಲಾನುಭವಿಗಳಿಗೆ ನೀಡಲಾಗಿಲ್ಲ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಸಂಪತ್ ಕುಮಾರ್ ಸಂತ್ರಸ್ತರಾದ ಅನಿತಾ, ಸೋಮಶೇಖರ್ ಎಂಬುವರ ಪರವಾಗಿ ಮನವಿ ಸಲ್ಲಿಸಿದರು. ಈ ಬಗ್ಗೆ ತಹಸೀಲ್ದಾರ್ ಅವರಲ್ಲಿ ಮಾಹಿತಿ ಪಡೆದಾಗ 48 ಜನರಿಗೆ 1ಲಕ್ಷ ಕೋವಿಡ್ ಪರಿಹಾರ ನೀಡಬೇಕಾಗಿದೆ ಎಂದು ತಿಳಿಸಿದರು. ಸರ್ಕಾರದಿಂದ ಹಣ ಬಂದ ಬಳಿಕ ಪರಿಹಾರ ನೀಡಲಾಗುವುದೆಂದು ತಿಳಿಸಿದರು.

ಆಂಡಿಪಾಳ್ಯ ಗ್ರಾಮದಲ್ಲಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿರುವ ದಾರಿಯನ್ನು ತೆರೆವುಗೊಳಿಸುವುದು, ನಾಗನಕಟ್ಟೆ ಗ್ರಾಮ ಠಾಣೆಯನ್ನು ಗುರುತಿಸಿ ಸ್ಮಶಾನ ಜಾಗ ಇನ್ನಿತರ ಸೌಕರ್ಯವನ್ನು ಕಲ್ಪಿಸಬೇಕೆಂದು ದಸಂಸ ಸಂಘಟನೆಯ ಸಿದ್ದರಾಜು ದೂರಿದರು.

ರಾಮನಗುಡ್ಡ ಬೋರ್ ವೆಲ್ ಮೂಲಕ ಪಟ್ಟಣಕ್ಕೆ ಬರುವ ನೀರಿನ ಪೈಪ್ ಲೈನ್ ಹೊಡೆದ ಪರಿಣಾಮ 13ನೇ ವಾರ್ಡಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸಣ್ಣ ದುರಸ್ತಿ ಕಾರ್ಯವನ್ನು ಮಾಡಲು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮೀನಮೇಶ ಎಣಿಸುತ್ತಾರೆ, ನಿಗದಿತ ಅವಧಿಗೆ ಪಂಚಾಯಿತಿ ಮೀಟಿಂಗ್ ಕರೆಯೋದಿಲ್ಲ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಮಹೇಶ್ ದೂರಿದರು. ಈ ವೇಳೆ ಜಿಲ್ಲಾಧಿಕಾರಿಗಳು ಕೂಡಲೇ ವೈಪ್ ಲೈನ್ ದುರಸ್ತಿ, ಮೀಟಿಂಗ್ ಕರೆವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಮುಖ್ಯ ಶಿಕ್ಷಕಿ ರತ್ನಮ್ಮ ಎಂಬವರು ಕಳೆದ 20 ವರ್ಷದಿಂದ ಪಟ್ಟಣದ ಆರ್ ಎಸ್ ದೊಡ್ಡಿ ಗ್ರಾಮದಲ್ಲಿ ಕ್ರಯಕ್ಕೆ ನಿವೇಶನ ಪಡೆದು ಅಂದಿನಿಂದ ಇಂದಿನವರೆಗೂ ಕಂದಾಯ ಪಾವತಿಸಿ ಈ ಸ್ವತ್ತು ಪಡೆದಿದ್ದೇನೆ .ಆದರೆ ಪಟ್ಟಣ ಪಂಚಾಯಿತಿಯವರು ಪಟ್ಟಣ ಪಂಚಾಯಿತಿ ಅವರು ಸಿದ್ದರಾಜು ಎಂಬುವವರಿಗೆ ಅದೇ ನಿವೇಶನಕ್ಕೆ ಈ ಸ್ವತ್ತನ್ನು ನೀಡಿದ್ದಾರೆ ಎಂದು ಅಳಲು ತೋಡಿಕೊಂಡರು. ಇದಕ್ಕೆ ಜಿಲ್ಲಾಧಿಕಾರಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಈ ಕೂಡಲೇ ದಾಖಲೆಗಳನ್ನು ಪರಿಶೀಲಿಸಿ ಸಂಬಂಧ ಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಅವರಿಗೆ ನ್ಯಾಯ ಒದಗಿಸಿಕೊಡಿ ಎಂದು ಸೂಚಿಸಿದರು.

ಇದೇ ರೀತಿ ಜಿಲ್ಲಾಧಿಕಾರಿಗಳು ಅನೇಕ ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಪಡೆದು ಕ್ರಮವಹಿಸಲಾಗುವುದೆಂದು ಭರವಸೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಆನಂದಯ್ಯ ,ಮುಖ್ಯಾಧಿಕಾರಿ ಮೂರ್ತಿ,ಭೂದಾಖಲೆಗಳ ಸಹಾಯಕ ನಿರ್ದೇಶಕ ಚೇತನ್ , ಭೂಮಾಪಕ ಕುಮಾರಸ್ವಾಮಿ, ತಾ ಪಂ ಎಡಿ ರವೀಂದ್ರ,ಶಿರಸ್ತೇದಾರ್ ನಾಗೇಂದ್ರ, ಕಂದಾಯ ನಿರೀಕ್ಷಕರು ಗಳಾದ ಬಿ ಪಿ ಮಾದೇಶ್, ಶಿವಕುಮಾರ್, ಮಹದೇವ ಸ್ವಾಮಿ, ಗ್ರಾಮಲೆಕ್ಕಿಗ ಶೇಷಣ್ಣ, ರಾಜು ವಿನೋದ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolana

Recent Posts

ಮೈಸೂರಿನಲ್ಲಿ ನಿಮ್ಹಾನ್ಸ್‌ ಘಟಕ ಸ್ಥಾಪನೆಗೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…

1 min ago

ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಪ್ರಹ್ಲಾದ್‌ ಜೋಶಿ ವಿರುದ್ಧ ಬಿ.ಕೆ.ಹರಿಪ್ರಸಾದ್‌ ಕಿಡಿ

ಬೆಂಗಳೂರು: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೀಡಿರುವ ಹೇಳಿಕೆ ಅಮಿತ್‌…

32 mins ago

ಹೆಣ್ಣು ಕಾನೂನನ್ನು ಅರಿತರೆ ಅಷ್ಟೇ, ದೌರ್ಜನ್ಯ ಎದುರಿಸಲು ಸಾಧ್ಯ: ನಾಗಲಕ್ಷ್ಮೀ ಚೌಧರಿ

ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…

1 hour ago

ಮೈಸೂರು:  ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…

2 hours ago

ಡಿ.ಕೆ.ಸಹೋದರರಿಗೆ ಮದುವೆ ಕರೆಯೋಲೆ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರಿಗೆ ನೀಡಿ…

2 hours ago

ಶುಚಿತ್ವ, ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡ ಜಯದೇವ :ಸಿ.ಎಂ ಪ್ರಶಂಸೆ

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…

2 hours ago