Mysore
26
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಹನೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಆರ್ ನರೇಂದ್ರ

ಹನೂರು :ಮಲೆ ಮಾದೇಶ್ವರ ಬೆಟ್ಟ ಮುಖ್ಯ ರಸ್ತೆಯಿಂದ ಪ್ರಾಧಿಕಾರದ ಕಚೇರಿ ವರೆಗಿನ ಎರಡು ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು.

ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ವಿನೂತನ ಮಾದರಿಯಲ್ಲಿ ಕಲ್ಯಾಣಿ, 108 ಅಡಿ ಮಲೆ ಮಹದೇಶ್ವರ ಪ್ರತಿಮೆ, ಹೈಟೆಕ್ ವಸತಿಗೃಹಗಳು, ವಾಹನ ದಟ್ಟಣೆ ನಿಯಂತ್ರಿಸಲು ಈಗಾಗಲೇ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ ಪ್ರಾಧಿಕಾರದ ವತಿಯಿಂದ ಭಕ್ತಾದಿಗಳ ಅನುಕೂಲಕ್ಕಾಗಿ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಎರಡು ಕೋಟಿ ಅನುದಾನ ಬಿಡುಗಡೆಯಾಗಿದ್ದು ಕೊಳ್ಳೇಗಾಲ ಮುಖ್ಯರಸ್ತೆಯ ಗೇಟ್ ಇಂದ ಪ್ರಾಧಿಕಾರದ ಕಚೇರಿಯ ವರೆಗೆ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದಲ್ಲದೆ ಡಿ 12 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನಮ್ಮ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದು ಬಾಲಕಿಯರ ವಸತಿ ನಿಲಯ, ಇಂದಿರಾ ವಸತಿ ಶಾಲೆ,ಬಹುಗ್ರಾಮ ಕುಡಿಯುವ ನೀರು ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿರುವುದರಿಂದ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾಲೂರು ಬ್ರಹನ್ ಮಠದ ಅಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮಿ, ಉಪ ಕಾರ್ಯದರ್ಶಿ ಬಸವರಾಜು, ಗ್ರಾಪಂ ಅಧ್ಯಕ್ಷ ಕುಮಾರ್, ಎ ಇ ಇ ಚಿಕ್ಕಲಿಂಗಯ್ಯ, ಎ ಇ ಗಳಾದ ಶೋಭಾ, ದಿಲೀಪ್, ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ, ಶಿವಣ್ಣ ತಂಬಡಿ, ಪುಟ್ಟಸ್ವಾಮಿ, ಸೆಲ್ವ ಕುಮಾರ್ ಗುತ್ತಿಗೆದಾರ ಅಪ್ಪ ದೊರೆ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!