ಹನೂರು :ಮಲೆ ಮಾದೇಶ್ವರ ಬೆಟ್ಟ ಮುಖ್ಯ ರಸ್ತೆಯಿಂದ ಪ್ರಾಧಿಕಾರದ ಕಚೇರಿ ವರೆಗಿನ ಎರಡು ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು.
ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ವಿನೂತನ ಮಾದರಿಯಲ್ಲಿ ಕಲ್ಯಾಣಿ, 108 ಅಡಿ ಮಲೆ ಮಹದೇಶ್ವರ ಪ್ರತಿಮೆ, ಹೈಟೆಕ್ ವಸತಿಗೃಹಗಳು, ವಾಹನ ದಟ್ಟಣೆ ನಿಯಂತ್ರಿಸಲು ಈಗಾಗಲೇ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ ಪ್ರಾಧಿಕಾರದ ವತಿಯಿಂದ ಭಕ್ತಾದಿಗಳ ಅನುಕೂಲಕ್ಕಾಗಿ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಎರಡು ಕೋಟಿ ಅನುದಾನ ಬಿಡುಗಡೆಯಾಗಿದ್ದು ಕೊಳ್ಳೇಗಾಲ ಮುಖ್ಯರಸ್ತೆಯ ಗೇಟ್ ಇಂದ ಪ್ರಾಧಿಕಾರದ ಕಚೇರಿಯ ವರೆಗೆ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇದಲ್ಲದೆ ಡಿ 12 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನಮ್ಮ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದು ಬಾಲಕಿಯರ ವಸತಿ ನಿಲಯ, ಇಂದಿರಾ ವಸತಿ ಶಾಲೆ,ಬಹುಗ್ರಾಮ ಕುಡಿಯುವ ನೀರು ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿರುವುದರಿಂದ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಾಲೂರು ಬ್ರಹನ್ ಮಠದ ಅಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮಿ, ಉಪ ಕಾರ್ಯದರ್ಶಿ ಬಸವರಾಜು, ಗ್ರಾಪಂ ಅಧ್ಯಕ್ಷ ಕುಮಾರ್, ಎ ಇ ಇ ಚಿಕ್ಕಲಿಂಗಯ್ಯ, ಎ ಇ ಗಳಾದ ಶೋಭಾ, ದಿಲೀಪ್, ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ, ಶಿವಣ್ಣ ತಂಬಡಿ, ಪುಟ್ಟಸ್ವಾಮಿ, ಸೆಲ್ವ ಕುಮಾರ್ ಗುತ್ತಿಗೆದಾರ ಅಪ್ಪ ದೊರೆ ಸೇರಿದಂತೆ ಇನ್ನಿತರರು ಹಾಜರಿದ್ದರು.
ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…
ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…
ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ…
ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…
ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24…
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು…