ಜಿಲ್ಲೆಗಳು

ಹನೂರು : ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ಹನೂರು; ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಆರ್.ನರೇಂದ್ರ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಆದ್ದರಿಂದ ವಿವಿಧ ಇಲಾಖೆಯ ಅಧಿಕಾರಿಗಳು ಜಾವಬ್ದಾರಿಯನ್ನು ವಹಿಸಿಕೊಳ್ಳಬೇಕು. ಈ ಸಂಬಂಧ ಪೂರ್ವ ತಯಾರಿ ನಡೆಸಬೇಕು. ಕುಡಿಯುವ ನೀರು, ವಿದ್ಯಾರ್ಥಿಗಳು, ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ಶಾಮಿಯಾನ ವ್ಯವಸ್ಥೆ ಮಾಡಬೇಕು. ಯಾವುದೇ ಲೋಪ ಆಗದಂತೆ ಕಾರ್ಯಕ್ರಮವನ್ನು ರೂಪುಗೊಳಿಸಬೇಕು. ಈ ದಿಸೆಯಲ್ಲಿ ಅಧಿಕಾರಿಗಳು ಸಂಘ ಸಂಸ್ಥೆಗಳ ಸಹಕಾರವನ್ನು ಪಡೆದುಕೊಳ್ಳಬೇಕು. ಅಲ್ಲದೇ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಬೇಕು. ಈ ಮೂಲಕ ಗಣರಾಜೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ತಹಸೀಲ್ದಾರ್ ಆನಂದಯ್ಯ, ಗ್ರೇಡ್ 2 ತಹಸೀಲ್ದಾರ್ ಧನಂಜಯ, ಬಿಇಒ ಶಿವರಾಜು, ಪಪಂ ಮುಖ್ಯಾಧಿಕಾರಿ ಮೂರ್ತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನವೀದ್ ಮಠದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಂಗಾಧರ್, ಕೃಷಿ ಸಹಾಯಕ ನಿರ್ದೇಶಕಿ ಸುಂದರಮ್ಮ, ಹಾಗೂ ಇನ್ನಿತರರು ಹಾಜರಿದ್ದರು.

andolanait

Recent Posts

ಮಂಡ್ಯ ನೆಲದಲ್ಲಿ ಕನ್ನಡ ಕಹಳೆ

ಮಂಡ್ಯ: ಸಕ್ಕರೆ ನಗರಿಯಲ್ಲಿ ಶುಕ್ರವಾರ ಆಕ್ಷರಶಃ ದೊಡ್ಡ ಜಾತ್ರೆಯ ಸೊಬಗು ಮನೆ ಮಾಡಿತ್ತು. ಎಲ್ಲಿ ನೋಡಿದರಲ್ಲಿ ಜನವೋ ಜನ; ಅದು…

7 mins ago

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

9 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

9 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

10 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

10 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

10 hours ago