ಹನೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಳಪೆ ಕಾಮಗಾರಿಯಾಗಿದೆ ಎಂದು ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ಮುತ್ತಯ್ಯ ತಿಳಿಸಿದ್ದಾರೆ
ತಾಲೂಕಿನ ಶಾಗ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಣಿಗ ಮಂಗಲ ಕಾಡಂಚಿನ ಗ್ರಾಮವಾಗಿದ್ದು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 1ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ, ಜಲ್ಲಿಕಲ್ಲಿನಿಂದ ಮೆಟ್ಲಿಂಗ್ ಮಾಡದೆ ಗುಣಮಟ್ಟವು ಇಲ್ಲದ ಎಂ ಸ್ಯಾಂಡ್ ಬಳಸಿ ಕಳಪೆ ಕಾಮಗಾರಿ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.
ಸೋಲಿಗ ಜನಾಂಗವೇ ಹೆಚ್ಚಾಗಿರುವ ಈ ಗ್ರಾಮದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ನಡೆಸುತ್ತಿರುವ ಕಾಮಗಾರಿ ಕಳಪೆ ಕಾಮಗಾರಿಯಾಗಿದೆ. ಕೂಡಲೇ ಸಂಬಂಧಪಟ್ಟ ಜಿಲ್ಲಾಡಳಿತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿ ಉತ್ತಮ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಬೇಕು ಎಂದು ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ಕರಿಯಪ್ಪ ಬೋಳ್ಮಾದ ರಾಜಪ್ಪ ಗ್ರಾಮ ಪಂಚಾಯಿತಿ ಸದಸ್ಯೆ ರಾಜಮ್ಮಕಳಪೆ ಕಾಮಗಾರಿ ನಡೆಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಗೆ ದೂರು ಸಲ್ಲಿಸಿದ್ದಾರೆ.
ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೆಆರ್ ಐಡಿಎಲ್ ಅಧಿಕಾರಿಗಳ ಜತೆ ಚರ್ಚಿಸಿ ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಲಾಗುವುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನವೀನ್ ಮಠದ ತಿಳಿಸಿದ್ದಾರೆ.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್ ಪಾರ್ಟಿ ಮೂಲಕ…
ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…