ಹನೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮೆಲ್ಲರ ಗುರಿಯಾಗಿರಬೇಕೆಂದು ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು.
ಹನೂರು ಪಟ್ಟಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷ ಸಂಘಟನೆ ಸಂಬಂಧ ಆಗಮಿಸುತ್ತಿರುವ ಹಿನ್ನೆಲೆಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನಡೆಸಿ ಜನಮನ್ನಣೆ ಗಳಿಸಿದೆ,ಈ ಅವಧಿಯಲ್ಲಿ ಆಗಿರುವ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರ ಮನೆ ಮನೆಗೂ ತಲುಪಿಸಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು. ಬಿಜೆಪಿ ಜಿಲ್ಲಾ ಉಸ್ತುವಾರಿ ಮೈ ವಿ ರವಿಶಂಕರ್ ಮಾತನಾಡಿ ಇಡೀ ದೇಶಾದ್ಯಂತ ತಳಮಟ್ಟದಿಂದ ಸದೃಢವಾಗಿ ನೆಲೆಗೊಂಡಿರುವ ಬಿಜೆಪಿ ಪಕ್ಷದಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪಕ್ಷ ಸಂಘಟನೆಗೆ ಒತ್ತು ನೀಡಬೇಕು,ಕಾರ್ಯಕರ್ತರುಗಳು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದತ್ತೇಶ್ ಕುಮಾರ್,ರಾಜ್ಯ ಪರಿಷತ್ ಸದಸ್ಯ ಬೂದುಬಾಳು ವೆಂಕಟಸ್ವಾಮಿ,ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯರು ಗಳಾದ ಪುಟ್ಟರಾಜು ವೆಂಕಟೇಗೌಡ ಹನೂರು ಮಂಡಲ ಅಧ್ಯಕ್ಷ ಸಿದ್ದಪ್ಪ ರಾಮಪುರ ಮಂಡಲ ಅಧ್ಯಕ್ಷ ವೀರಭದ್ರ,ಮುಖಂಡ ಪ್ರೀತಂ ನಾಗಪ್ಪ ಸೇರಿದಂತೆ ವಿವಿಧ ಗ್ರಾಮಗಳ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.