ಹನೂರು : ಪಟ್ಟಣದ 7ನೇ ವಾರ್ಡ್ ನ ಎಸ್‌ಟಿ ಸಮುದಾಯವಿರುವ ಆಂಜನೇಯ ಬಡಾವಣೆಯಲ್ಲಿ ಚರಂಡಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದಾರೆ, ಕೂಡಲೇ ಸಮರ್ಪಕವಾಗಿ ಚರಂಡಿ ಕಾಮಗಾರಿಯನ್ನು ಮಾಡುವಂತೆ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿರವರಿಗೆ ಮನವಿ ಸಲ್ಲಿಸಿದ್ದಾರೆ.
ಬಡಾವಣೆಯ ನಿವಾಸಿ ನಾಗಲಿಂಗಾಚಾರಿ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 7ನೇ ವಾರ್ಡಿನ ಆಂಜನೇಯ ಬಡಾವಣೆಯಲ್ಲಿ ಪರಿಶಿಷ್ಟ ವರ್ಗದ 25ಕ್ಕೂ ಹೆಚ್ಚು ಕುಟುಂಬಗಳಿದೆ. ಲಕ್ಷಾಂತರ ಅನುದಾನ ಬರುತಿದ್ದರು ಸಹ 7ನೇ ವಾರ್ಡಿಗೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ, ಬಡಾವಣೆಯಲ್ಲಿ ಸಮರ್ಪಕ ಮೂಲಸೌಕರ್ಯ ಕಲ್ಪಿಸದೆ ಅನ್ಯಾಯ ವ್ಯಸಗುತ್ತಿದ್ದಾರೆ. ಈ ಬಗ್ಗೆ ವಾರ್ಡ್ ನ ಸದಸ್ಯರಿಗೂ ಹಲವು ಬಾರಿ ಮನವಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ, ಇರುವ ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಮುಂದೆ ಹೋಗಲು ಸಾಧ್ಯವಾಗದೆ ಇರುವುದರಿಂದ ಸಾಂಕ್ರಮಿಕ ರೋಗದ ಭೀತಿಯಲ್ಲಿದ್ದೇವೆ ಮುಖ್ಯಾಧಿಕಾರಿಯಾದ ನೀವು ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಿ ಸಮರ್ಪಕ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಹಾಜರಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…