Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಹನೂರು : ಮಳೆಗೆ ಮನೆ ಗೋಡೆ ಕುಸಿತ

ಹನೂರು: ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದಲ್ಲಿ ಜರುಗಿದೆ.

ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಮಹಾದೇವಶೆಟ್ಟಿ ರವರಿಗೆ ಸೇರಿದ ಮನೆಯ ಒಂದು ಭಾಗ ಸಂಪೂರ್ಣ ಕುಸಿದಿರುವುದರಿಂದ ವಾಸವಿರಲು ತೊಂದರೆಯಾಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.


ನನಗೆ ಇದ್ದ ಚಿಕ್ಕ ಮನೆಯು ಸಹ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದು ಬಿದ್ದಿದೆ .ಈ ಮನೆಯಲ್ಲಿ ವಾಸವಿರಲು ಸಾಧ್ಯವಾಗುತ್ತಿಲ್ಲ ಸರ್ಕಾರದವರು ನನಗೆ ಒಂದು ಮನೆ ನಿರ್ಮಾಣ ಮಾಡಿಕೊಡಬೇಕು.

ಮಹದೇವಶೆಟ್ಟಿ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!