ಹನೂರು : ಅಕ್ರಮವಾಗಿ ಮಾರಾಟ ಮಾಡಲು ಒಣ ಗಾಂಜಾವನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದ ವ್ಯಕ್ತಿಯೊರ್ವನ ಮನೆ ಮೇಲೆ ಹನೂರು ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಬೂದಿ ಪಡಗ ಗ್ರಾಮದ ಶಿವಮಾದಶೆಟ್ಟಿ (55) ಬಂಧಿತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಅಕ್ರಮ ಗಾಂಜಾ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಬಂಧಿತನಿಂದ 300 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಬಂಧಿತನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ದಾಳಿಯಲ್ಲಿ ಪೇದೆಗಳಾದ ರಾಘವೇಂದ್ರ,ಚೇತನ್ ಕುಮಾರ್,ಪ್ರಭು,ರಾಮಕೃಷ್ಣ ಮತ್ತು ಶಿವಕುಮಾರ್, ಗ್ರಾಮ ಆಡಳಿತ ಅಧಿಕಾರಿ ಕುಮಾರ್, ತಾಲೂಕು ಪಂಚಾಯಿತಿ ಮ್ಯಾನೇಜರ್ ಶಂಕರ್ ಪಾಲ್ಗೊಂಡಿದ್ದರು.