ಜಿಲ್ಲೆಗಳು

ಹನೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನದ್ದೇ ದರ್ಬಾರ್, ಖಾತೆ ತೆರೆಯದ ಬಿಜೆಪಿ

ಹನೂರು : ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ನಡೆಯುತ್ತಿದೆ ಆದರೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ನರೇಂದ್ರ ಅವರನ್ನು ಹೊರತುಪಡಿಸಿ ಇನ್ಯಾರು ಅರ್ಜಿ ಸಲ್ಲಿಸಿಲ್ಲ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಹಾಲಿ ಶಾಸಕ ಆರ್ ನರೇಂದ್ರ ರವರು ಈಗಾಗಲೇ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿ, ಮೊಟ್ಟ ಮೊದಲ ಚುನಾವಣೆಯಲ್ಲಿ ಪರಾಭವಗೊಂಡರು ಎದೆಗುಂದದೆ ಸತತ ಮೂರು ಚುನಾವಣೆಗಳಲ್ಲಿ ಜಯಗಳಿಸುವ ಮೂಲಕ ಕ್ಷೇತ್ರದಲ್ಲಿ ಯಾರೂ ಮಾಡದ ಸಾಧನೆಯನ್ನು ಮಾಡಿ ತೋರಿಸಿ ಮನೆತನದ ಹೆಸರನ್ನು ಗಟ್ಟಿಗೊಳಿಸಿದ್ದಾರೆ.

ರಾಜುಗೌಡ

ರಾಜ್ಯಗಳ ಪುನರ್ ವಿಂಗಡಣೆಗೆ ಮೊದಲು ಹನೂರು ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. 1957 ರ ಕೊಳ್ಳೇಗಾಲ ಹಾಗೂ ಪಾಳ್ಯ ಎಂಬ ಹೆಸರಿನ ಎರಡು ವಿಧಾನಸಭಾ ಕ್ಷೇತ್ರ ಉದಯವಾಗಿ ಪಾಳ್ಯ ಕ್ಷೇತ್ರದಿಂದ ಹಾಲಿ ಶಾಸಕ ಆರ್ ನರೇಂದ್ರರವರ ದೊಡ್ಡಪ್ಪ ಜಿ ವೆಂಕಟೇಗೌಡ ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.1962 ರಲ್ಲಿ ಪಾಳ್ಯ ಹನೂರು ಕ್ಷೇತ್ರವಾಗಿ ನಾಮಕರಣಗೊಂಡಿತು.

ವೆಂಕಟೇಗೌಡ

ಕ್ಷೇತ್ರದಲ್ಲಿ ದೊಡ್ಡಪ್ಪ ಎರಡು ಬಾರಿ,ತಂದೆ ಮಾಜಿ ಸಚಿವ ದಿ. ಜಿ ರಾಜು ಗೌಡ ನಾಲ್ಕು ಬಾರಿ, ಜಿ ರಾಜುಗೌಡ ರವರ ಸುಪುತ್ರ ಆರ್ ನರೇಂದ್ರ ಮೂರು ಬಾರಿ ಕ್ಷೇತ್ರದಲ್ಲಿ ಸುದೀರ್ಘ 45 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ.

ಶಾಸಕ ಆರ್ ನರೇಂದ್ರ

ಹನೂರು ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ : ಹನೂರು ಕ್ಷೇತ್ರದ ವೈಶಿಷ್ಟವೇನೆಂದರೆ ಮಾಜಿ ಸಚಿವ ದಿ ರಾಜುಗೌಡ ಹಾಗೂ ದಿ. ಹೆಚ್ ನಾಗಪ್ಪ ಎಂಬ ಹೆಸರು ರಾಜ್ಯದಲ್ಲಿಯೇ ಪ್ರಸಿದ್ಧಿ, ಎರಡು ಮನೆತನದ ಅಭ್ಯರ್ಥಿಗಳೇ ರಾಜ್ಯಗಳ ಪುನರ್ ವಿಂಗಡಣೆಯ ನಂತರ ಎರಡು ಚುನಾವಣೆಗಳನ್ನು ಹೊರತುಪಡಿಸಿ ಇದುವರೆಗೂ ಸ್ಪರ್ಧಿಸಿ ಜಯಗಳಿಸಿರುವುದು ವಿಶೇಷ. ದಿವಂಗತ ಎಚ್ ನಾಗಪ್ಪ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಒಟ್ಟು 9 ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸಿ ಕಾಂಗ್ರೆಸ್ ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಖಾತೆ ತೆರೆಯದ ಬಿಜೆಪಿ : ಇದುವರೆಗೂ 14 ಚುನಾವಣೆಗಳ ನಡೆದಿದ್ದು ಒಂದು ಬಾರಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿಲ್ಲ, ಇದುವರೆಗೆ ಪಕ್ಷೇತರರು 3 ಬಾರಿ, ಕಾಂಗ್ರೆಸ್ ಅಭ್ಯರ್ಥಿಗಳು, ಎರಡು ಬಾರಿ ಜನತಾದಳ ಅಭ್ಯರ್ಥಿಗಳು, ಜಾತ್ಯತೀತ ಜನತಾದಳ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

ಕ್ಷೇತ್ರದಲ್ಲಿ ಕಾಂಗ್ರೆಸ್, ಜಾತ್ಯತೀತ ಜನತಾದಳ,ಬಿಜೆಪಿ ಎನ್ನುವುದಕ್ಕಿಂತ ಮಾಜಿ ಸಚಿವ ದಿ.ರಾಜುಗೌಡ ಹಾಗೂ ಹೆಚ್ ನಾಗಪ್ಪ ರವರ ಮನೆತನಗಳ ಚುನಾವಣೆ ಎಂದು ಬಿಂಬಿಸಲಾಗುತ್ತಿದೆ. ಈ ಬಾರಿಯಾದರೂ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯಾದರೂ ಬಿಜೆಪಿ ಖಾತೆ ತೆರೆಯಲಿದೆಯೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

ವರದಿ: ಮಹಾದೇಶ್ ಎಂ ಗೌಡ

andolanait

Recent Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

5 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

5 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

6 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

7 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

7 hours ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

7 hours ago