ಹನೂರು: ಅಮಾಯಕರ ಮೇಲೆ ಹಲ್ಲೆ ಮಾಡಿ ಅವರಿಗೆ ಮಾನಸಿಕವಾಗಿ ಹಿಂಸೆ ನೀಡಿರುವ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ವನ್ನಿಕುಲ ಕ್ಷತ್ರಿಯ ಜಿಲ್ಲಾಧ್ಯಕ್ಷ ಪೆದ್ದನಪಾಳ್ಯ ಮಣಿ ಆಗ್ರಹಿಸಿದರು.
ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಂಚಿನ ಗ್ರಾಮಗಳ ಜನರನ್ನು ಅತ್ಯಂತ ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದ್ದಾರೆ. ಇವರ ಕಿರುಕುಳದಿಂದಾಗಿ ಜನರು ದಿನನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಯಾವುದೇ ತಪ್ಪು ಮಾಡದ ಅಮಾಯಕರನ್ನು ಜಾತಿನಿಂದನೆ ಮಾಡುವುದರ ಜತೆಗೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದರು.
ಇದೇ ವೇಳೆ ಡಿಎಫ್ ಒ ಹಲ್ಲೆಗೊಳಗಾಗಿದ್ದ ಮಾದೇಶ್ ಮಾತನಾಡಿ ನಾಲ್ ರೋಡ್ ಬಳಿಯ ಹಳ್ಳದಲ್ಲಿ ಸ್ನಾನ ಮಾಡಿಕೊಂಡು ಬರುತ್ತಿದ್ದಾಗ ಡಿಎಫ್ ಓ ಸಂತೋಷ್ ಕುಮಾರ್, ಆರ್ ಎಫ್ ಓ ಗಿರಿಧರ್ ಹಾಗೂ ಸುಂದರ್ ಅವರುಗಳು ಎರಡು ಜೀಪಿನಲ್ಲಿ 10 ಕ್ಕೂ ಹೆಚ್ಚು ಜನರು ಬಂದು ನಮ್ಮನ್ನು ಹೆದರಿಸಿದ್ದಾರೆ. ಬಳಿಕ ಆರ್ ಎಫ್ ಓ ಗಿರಿಧರ್ ನನ್ನ ಕೈಹಿಡಿದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ ಮೀನು ಹಿಡಿಯಲು ಹೋಗಿದ್ದೀಯಾ ಎಂದು ಎಡಗಾಲಿಗೆ ಹಾಗೂ ದೇಹದ ಇತರೆ ಭಾಗಗಳಿಗೆ ದೊಣ್ಣೆಯಿಂದ ಹೊಡೆದು ದೌರ್ಜನ್ಯವೆಸಗಿದ್ದಾರೆ.
ಸಮೀಪದಲ್ಲೇ ಇದ್ದ ಡಿಎಫ್ ಓ. ಸಂತೋಷ್ ಕುಮಾರ್ ಸಹ ನನಗೆ ಹಾಗೂ ಮಣಿಯವರಿಗೆ ದೊಣ್ಣೆಯಿಂದ ಹೊಡೆದು ಹಲ್ಲೆ ಮಾಡುವುದರ ಜತೆಗೆ ಜಾತಿನಿಂದನೆ ಮಾಡಿದ್ದಾರೆ. ಅಲ್ಲದೇ ನಮ್ಮನ್ನು ನಾಲ್ ರೋಡ್ ಕ್ಯಾಂಪ್ ಗೆ ಕರೆತಂದು ಬಳಿಕ ಹೂಗ್ಯಂ ಅರಣ್ಯ ಇಲಾಖೆ ಕಚೇರಿಗೆ ಕರೆದೊಯ್ದರು. ಅಂದು ರಾತ್ರಿ ಪೂರ್ತಿ ಕಚೇರಿಯಲ್ಲೇ ಇರಿಸಿ ಮಾರನೇ ದಿನ ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದರು. ಅರಣ್ಯಾಧಿಕಾರಿಗಳು ನಮಗೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ ಎಂದು ಮನವಿ ಮಾಡಿಕೊಂಡರು ವೈದ್ಯಾಧಿಕಾರಿಗಳಿಗೆ ತಿಳಿಸಿ ನಮ್ಮ ಹೇಳಿಕೆ ದಾಖಲು ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡರೂ ವೈದ್ಯರು ನಮಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದರು.
ಬಳಿಕ ನಮ್ಮನ್ನು ಯಳಂದೂರಿನ ನ್ಯಾಯಧೀಶರ ಮುಂದೆ ಹಾಜರು ಪಡಿಸಿದಾಗ ನಡೆದ ಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದ್ದೇವೆ. ಅರಣ್ಯಾಧಿಕಾರಿಗಳ ಹಿಂಸೆಯಿಂದ ತೀವ್ರವಾಗೊ ಜರ್ಜರಿತಗೊಂಡಿದ್ದೇವೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಪ್ರಧಾನ ಅರಣ್ಯ ಮುಖ್ಯ ಸಂರಕ್ಷಾಧಿಕಾರಿ ಅವರಿಗೂ ದೂರು ಸಲ್ಲಿಸಿದ್ದೇವೆ. ಯಾವುದೇ ತಪ್ಪು ಮಾಡದೇ ಇರುವ ನಮ್ಮನ್ನು ಅಮಾನುಷವಾಗಿ ನಡೆಸಿಕೊಂಡಿರುವ ಡಿಎಫ್ಓ ಸಂತೋಷ್ ಕುಮಾರ್ ಆರ್ ಎಫ್ ಓ ಗಳಾದ ಗಿರಿಧರ್ ಹಗೂ ಸುಂದರ್ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಸಂತ್ರಸ್ತ ಮಾದೇಶ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಿ,ಸದಸ್ಯರಾದ ಪೌಲ್ ರಾಜ್ ಮಾಜಿ ಸದಸ್ಯ ಸಮನ್ಸ್ ನಾದನ್ ,ಮುಖಂಡರುಗಳಾದ ಕಂದಸ್ವಾಮಿ ಮಾನವ ಹಕ್ಕುಗಳ ಆಯೋಗದ ಸದಸ್ಯ ನಾಗರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…