ಹನೂರು : ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು ರಾಜೀನಾಮೆ ನೀಡಿದ್ದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಇಂದು ಅಧ್ಯಕ್ಷರ ಚುನಾವಣೆ ನಡೆಯಿತು. ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ 10, ಪಕ್ಷೇತರ ಇಬ್ಬರು ಹಾಗೂ ಬಿಜೆಪಿ ಬೆಂಬಲಿತ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದರು.
30 ತಿಂಗಳ ಅಧ್ಯಕ್ಷಗಾದಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರ ಸಮ್ಮತಿಯ ಮೇರೆಗೆ ಮೊದಲ 10 ತಿಂಗಳಿಗೆ ಚಿಕ್ಕಮಾಲಾಪುರ ಗ್ರಾಮದಿಂದ ಆಯ್ಕೆಯಾಗಿದ್ದ ಅಶೋಕ್, ನಂತರದ ಹತ್ತು ತಿಂಗಳಿಗೆ ಬೆಳತ್ತೂರು ಗ್ರಾಮದ ನಂಜುಂಡಸ್ವಾಮಿ ಆಯ್ಕೆಯಾಗಿದ್ದರು ಇದೀಗ ಕೊನೆಯ10 ತಿಂಗಳಿಗೆ ಕಂಡಯ್ಯನ ಪಾಳ್ಯ ಗ್ರಾಮದಿಂದ ಆಯ್ಕೆಯಾಗಿದ್ದ ಕಲಾವತಿ ಮಾದೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಲಾವತಿ ಮಾದೇಶ್ ಹೊರತು ಪಡಿಸಿ ಇನ್ಯಾರು ಅರ್ಜಿ ಸಲ್ಲಿಸದ ಹಿನ್ನೆಲೆ ಚುನಾವಣಾ ಅಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕಲಾವತಿ ಮಾದೇಶ ರವರನ್ನ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.
ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಈ ವೇಳೆ ಗ್ರಾಪಂ ಉಪಾಧ್ಯಕ್ಷ ಮಹದೇವಮ್ಮ, ಸದಸ್ಯರುಗಳಾದ ಪುಷ್ಪಾವತಿ,ರಾಜಮಣಿ ,ನಾಗಣ್ಣ, ಪ್ರಭುಸ್ವಾಮಿ, ರಾಜಿ ಬಾಯಿ, ಚೆನ್ನಪ್ಪ, ಮಲ್ಲೇಶ್, ನಂಜುಂಡಸ್ವಾಮಿ, ಅಶೋಕ್, ಮುಖಂಡರುಗಳಾದ ವೆಂಕಟೇಶ್, ನಂಜುಂಡ ಶೆಟ್ಟಿ, ಕಂಡಯ್ಯನ ಪಾಳ್ಯ ಮಾದೇಶ್, ಉದ್ದನೂರು ಸಿದ್ದರಾಜು, ರುದ್ರಪ್ಪ, ಶಿವಣ್ಣ,ವೇಲು ಸ್ವಾಮಿ, ಮಲ್ಲು ಸ್ವಾಮಿ, ಅಂಕರಾಜು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…