ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯ ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಉಡುತೊರೆ ಜಲಾಶಯ ಸತತ ಎರಡು ವರ್ಷಗಳಿಂದ ಭರ್ತಿಯಾಗುತ್ತಾ ಬಂದಿದೆ, ಕಳೆದ 18 ವರ್ಷಗಳಿಂದ ಮೇ ಮತ್ತು ಜೂನ್ ತಿಂಗಳಲ್ಲಿ ಜಲಾಶಯಗಳು ತುಂಬಿದ ಇತಿಹಾಸವೇ ಇಲ್ಲ,ಕಳೆದ 2ವರ್ಷಗಳಿಂದ ಸಮರ್ಪಕ ಮಳೆ ಆಗುತ್ತಿರುವುದರಿಂದ ರೈತರಿಗೆ ಅನುಕೂಲವಾಗಿದೆ. ಜಲಾಶಯಗಳ ನಿರ್ವಹಣೆಗೆ ಸಂಬಂಧಪಟ್ಟ ನೀರಾವರಿ ಇಲಾಖೆಯವರು ಸಮರ್ಪಕ ಅನುದಾನವನ್ನು ನೀಡದೇ ಇರುವುದರಿಂದ ಜಲಾಶಯಗಳು ಮತ್ತು ಕಾಲುವೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ. ಗುಂಡಾಲ್ ಜಲಾಶಯ ಹಾಗೂ ಉಡುತೊರೆ ಜಲಾಶಯ ಅಭಿವೃದ್ಧಿಗೆ ತಲಾ 15 ಕೋಟಿ ರೂ.ಗಳ ಅಗತ್ಯವಿದೆ ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಆದರೂ ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಮಗೆರೆಯಲ್ಲಿರುವ ನೀರಾವರಿ ಕಚೇರಿಯನ್ನು ಅಜ್ಜೀಪುರಕ್ಕೆ ಸ್ಥಳಾಂತರಿಸಬೇಕೆಂದು ಮೂರು ಜನ ಉಸ್ತುವಾರಿ ಸಚಿವರುಗಳಿಗೆ ಮನವಿ ಮಾಡಿಕೊಂಡಿದ್ದೆ.ಆದರೆ ಒಬ್ಬರು ಸ್ಪಂದಿಸಲಿಲ್ಲ ಇದಲ್ಲದೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೂ ಇದುವರೆಗೆ ಕ್ರಮ ವಹಿಸಿಲ್ಲ ಎಂದರು.
ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯನ್ನು ಹನೂರಿಗೆ ಸ್ಥಳಾಂತರಿಸಲು ಈಗಾಗಲೇ ಸರ್ಕಾರ ಆದೇಶಿಸಲಾಗಿದೆ . ಅತಿ ಶೀಘ್ರದಲ್ಲಿ ಕಚೇರಿ ಸ್ಥಳಾಂತರವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಬಸವರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಮುಖಂಡರಾದ ಎಂ. ಮಾದೇವ್, ಅಜ್ಜೀಪುರ ನಾಗರಾಜು, ಕಲಂದರ್ ಪಾಷ ಎಇ ವೆಂಕಟೇಶ್ ಪ್ರಭು ಎಇಇಗಳಾದ ದೊಡ್ಡಿಂದುವಾಡಿ ರಮೇಶ್,ನವೀನ್,ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಹಾಜರಿದ್ದರು .
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…