ಹನೂರು: ಸಮೀಪದ ಮಂಗಲ ಏಕಲವ್ಯ ಮಾದರಿ ವಸತಿ ಶಾಲೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡ್ಡಿ ಪಂದ್ಯಾವಳಿಯಲ್ಲಿ (ಬಾಲಕರ ವಿಭಾಗ) ಪ್ರಥಮ ಸ್ಥಾನವನ್ನು ಪಡೆದು ರಾಜ್ಯ (ವಿಭಾಗ)ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆ ಸಂತೆಮರಳ್ಳಿಯ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡ್ಡಿ ಕ್ರೀಡಾಕೂಟ ಪಂದ್ಯಾವಳಿಯಲ್ಲಿ ಈ ಸಾಧನೆಗೈದಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾಗಲು ಕಾರಣಕರ್ತರಾದ ದೈಹಿಕ ಶಿಕ್ಷಕ ಬಾಲರಾಜು ಹಾಗೂ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರಾದ ಮಂಜುನಾಥ್, ಉಪನ್ಯಾಸಕ ವೃಂದ, ನಿಲಯಪಾಲಕರು ಅಭಿನಂದಿಸಿದ್ದಾರೆ.





