ಹನೂರು: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಮಲೆಮಹದೇಶ್ವರ ದರ್ಶನ ಪಡೆದರು. ನಂತರ ಪ್ರಾಧಿಕಾರದ ನೌಕರ ಕೆ ಮಹಾದೇವಸ್ವಾಮಿ ರವರು ತಮ್ಮ ಸ್ವಂತ ಹಣದಲ್ಲಿ ಗಣಪತಿ ದೇವಾಲಯ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ವಿನೂತನ ಮುಖ್ಯದ್ವಾರವನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ವಿ ಸೋಮಣ್ಣ ಪ್ರಾಧಿಕಾರದ ನೌಕರ ಮಹದೇವಸ್ವಾಮಿರವರು 7 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮುಖ್ಯದ್ವಾರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಕ್ಷೇತ್ರದ ಪವಾಡ ಪುರುಷ ಮಲೆ ಮಾದೇಶ್ವರ ಅವರಿಗೆ ಒಳಿತು ಮಾಡಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಡಿ ಎಸ್ ರಮೇಶ್, ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ ,ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್,ಪ್ರಧಾನ ಅರ್ಚಕ ಕರವೀರ ಸ್ವಾಮಿ,ಸಚಿವರ ಆಪ್ತ ಸಹಾಯಕ ಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…