ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.59 ಕೋಟಿ ರೂ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 10 ಗಂಟೆಯ ವರೆಗೂ ನಡೆಯಿತು.
ಈ ಬಾರಿ ಕಾರ್ತಿಕ ಮಾಸ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 34 ದಿನಗಳ ಅವಧಿಯಲ್ಲಿ 2 ಕೋಟಿ 59ಲಕ್ಷದ 31ಸಾವಿರದ 472 ರೂ 80 ಗ್ರಾಂ ಚಿನ್ನ ಹಾಗೂ 3.900 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು,ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಸಿಬ್ಬಂದಿಗಳಾದ ಜನಾರ್ದನ್, ಮಲ್ಲಿಕಾರ್ಜುನಪ್ಪ, ನಾಗರಾಜು, ಮಾದೇಶ್ , ಎಸ್ ಬಿಐ ಬ್ಯಾಂಕ್ ವ್ಯವಸ್ಥಾಪಕರು ,ಮ,ಬೆಟ್ಟ ವೃತ್ತ ನಿರೀಕ್ಷಕ ಬಸವರಾಜು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…