ಜಿಲ್ಲೆಗಳು

ಹನೂರು : ಮೃತ್ತಿಕಾ ಸಂಗ್ರಹ ಅಭಿಯಾನ

ಹನೂರು : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣದ ಪ್ರಯುಕ್ತ ನಾಡಿದಾದ್ಯಂತ ಮೃತ್ತಿಕಾ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಶ್ರೀನಿವಾಸ್ ತಿಳಿಸಿದರು.

ತಾಲ್ಲೂಕಿನ ಬೈಲೂರು, ಪಿ ಜಿ ಪಾಳ್ಯ, ಹುತ್ತೂರು, ಲೊಕ್ಕನಹಳ್ಳಿ, ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮೃತ್ತಿಕಾ ಸಂಗ್ರಹ ಅಭಿಯಾನ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು .

ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ ಕೆಂಪೇಗೌಡರ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಉದ್ಘಾಟಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಕೆಂಪೇಗೌಡರ ರಥ ತಾಲ್ಲೂಕಿನ ಎಲ್ಲಾ ಪಂಚಾಯಿತಿಗಳಲ್ಲಿ 2ದಿನಗಳ ಮೃತ್ತಿಕಾ(ಮಣ್ಣು ) ಸಂಗ್ರಹಿಸಲಾಗುತ್ತಿದೆ ಇದಕ್ಕಾಗಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಪ್ರಮುಖ ಜಾಗವನ್ನು ಗುರುತಿಸಲಾಗಿದೆ.ರಥವು ಆ ನಿಗದಿತ ಸ್ಥಳಕ್ಕೆ ಬಂದು ನಿಲ್ಲುತ್ತದೆ ಎಂದು ತಿಳಿಸಿದರು.
ಲೊಕ್ಕನಹಳ್ಳಿ ಹೋಬಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಮಹಿಳೆಯರು ಪೂರ್ಣಕುಂಭ ಕೋರುವ ಮೂಲಕ ಕೆಂಪೇಗೌಡ ರಥಕ್ಕೆ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಪಿಡಿಒಗಳಾದ ರಾಜು, ಕುರುಬರ, ಸಿದ್ಧಪ್ಪ,ರಘುನಾಥ್ ಸೇರಿದಂತೆ ಗ್ರಾಮಸ್ಥರು ಅಧಿಕಾರಿ ವರ್ಗದವರು ಹಾಜರಿದ್ದರು.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

6 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

6 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

7 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

7 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

7 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

7 hours ago