ಜಿಲ್ಲೆಗಳು

ಹನೂರು ಪತ್ರಕರ್ತರ ಭವನಕ್ಕೆ ಅನುದಾನ: ಸೋಮಣ್ಣ ಭರವಸೆ

ಹನೂರು: ನೂತನ ತಾಲ್ಲೂಕು ಕೇಂದ್ರದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು ಪತ್ರಕರ್ತರು ಸಮಾಜದ ನಾಲ್ಕನೇ ಪ್ರಮುಖ ಅಂಗ,ಸಮಾಜದಲ್ಲಿನ ಅಂಕುಡೊಂಕು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾದುದು. ಚಾ. ನಗರ ಜಿಲ್ಲಾ ಕೇಂದ್ರ ಹೊರತುಪಡಿಸಿ ಯಾವುದೇ ತಾಲ್ಲೂಕು ಕೇಂದ್ರಗಳಲ್ಲಿ ಪತ್ರಕರ್ತರ ಭವನ ಇರಲಿಲ್ಲ, ನೂತನ ಹನೂರು ತಾಲೂಕಿನಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಿಕೊಳ್ಳುತ್ತಿರುವುದು ಸಂತಸದ ವಿಚಾರ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರ ಜೊತೆ ಚರ್ಚೆ ನಡೆಸಿ ಆದಷ್ಟು ಬೇಗ ಭವನ ಕಾಮಗಾರಿಗೆ ಅನುದಾನ ಕೊಡಿಸಲು ಪ್ರಯತ್ನಿಸುತ್ತೇನೆ. ಇದಲ್ಲದೆ ವೈಯಕ್ತಿಕವಾಗಿ ಭವನ ನಿರ್ಮಾಣಕ್ಕೆ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ) ಹನೂರು ತಾಲ್ಲೂಕು ವತಿಯಿಂದ ಸಚಿವ ವಿ. ಸೋಮಣ್ಣ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ದೇವರಾಜ್ ನಾಯ್ಡು, ಅಧ್ಯಕ್ಷ ಮಹಾದೇಶ್ ಎಂ ಹಾಗೂ ಪದಾಧಿಕಾರಿಗಳು ಹಾಜರಿದ್ದರು

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

52 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

54 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

56 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

58 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

1 hour ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

1 hour ago