ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು 13ನೇ ವಾರ್ಡಿನ ಜೆಡಿಎಸ್ ಸದಸ್ಯ ಮಹೇಶ್ ಆರೋಪಿಸಿದ್ದಾರೆ.
ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯ 13 ವಾರ್ಡ್ ಗಳಿಗೆ ಸಮರ್ಪಕವಾಗಿ ಕಾವೇರಿ ಕುಡಿಯುವ ನೀರು, ಬೀದಿದೀಪ, ರಸ್ತೆ, ಚರಂಡಿ ಸ್ವಚ್ಛಗೊಳಿಸುವುದು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಆಡಳಿತ ವಿಫಲವಾಗಿದೆ.ಈ ಬಗ್ಗೆ ಹಲವು ಬಾರಿ ಅಧ್ಯಕ್ಷರು,ಉಪಾಧ್ಯಕ್ಷರು ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಇದರಿಂದ ವಾರ್ಡ್ ಗಳಲ್ಲಿ ನಮಗೆ ಮತ ನೀಡಿದವರಿಗೆ ಉತ್ತರಿಸಲು ಸಾಧ್ಯವಾಗದೆ ಅಸಹಾಯಕರಾಗಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
2019-20ರಿಂದ 24.10%,7.25% ‘ 5%ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವುದಿಲ್ಲ, ಅಧ್ಯಕ್ಷರು ಸಾಮಾನ್ಯ ಸಭೆ ಹೊರತುಪಡಿಸಿ 1ದಿನವಾದರೂ ಕಚೇರಿಗೆ ಬರುತ್ತಿಲ್ಲ, ಉಪಾಧ್ಯಕ್ಷರು ಕಚೇರಿಗೆ ಬಂದರೂ ಸಹ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುತ್ತಿಲ್ಲ
ಸಮಸ್ಯೆಗಳ ಬಗ್ಗೆ ಮುಖ್ಯಾಧಿಕಾರಿಗಳ ಗಮನಕ್ಕೂ ತಂದರೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಪಟ್ಟಣ ಪಂಚಾಯಿತಿ ಸದಸ್ಯರುಗಳು ಆಕ್ರೋಶ ವ್ಯಕ್ತಪಡಿಸಿದರು.
ಅಭಿವೃದ್ಧಿ ಕುಂಠಿತ: ಪಟ್ಟಣ ಪಂಚಾಯಿತಿ ಆದಾಯ ಮೂಲಗಳಾದ ಉದ್ದಿಮೆ ಪರವಾನಿಗೆ ,ನೀರಿನ ಕಂದಾಯ ಕಟ್ಟಡಗಳ ತೆರಿಗೆ ಹಾಗೂ ಮಳಿಗೆಗಳಿಂದ ಸರಿಯಾದ ರೀತಿ ಬಾಡಿಗೆ ವಸೂಲಾತಿ ಮಾಡದ ಹಿನ್ನೆಲೆ ಪಟ್ಟಣದ ಅಭಿವೃದ್ಧಿ ಕುಂಠಿತವಾಗಿದೆ. ಸಾಮಾನ್ಯ ಸಭೆಗಳಲ್ಲಿ ಹಲವು ಬಾರಿ ಅಧ್ಯಕ್ಷರ ಗಮನಕ್ಕೆ ತಂದರು ಸೌಜನ್ಯಕ್ಕೂ ಅಧಿಕಾರಿಗಳ ಜತೆ ಚರ್ಚಿಸಿಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಜೆಡಿಎಸ್ ಸದಸ್ಯರುಗಳಾದ ಮಹೇಶ್, ಮಹೇಶ್ ನಾಯ್ಕ, ಮುಮ್ತಾಜ್ ಬಾನು, ಆನಂದ್ ಕುಮಾರ್,ಪವಿತ್ರ,ಮಂಜುಳಾ ಬಿಜೆಪಿ ಸದಸ್ಯೆ ರೂಪಾ ಪಾಲ್ಗೊಂಡಿದ್ದರು .
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…