ಹನೂರು: ಸಮೀಪದ ಕುರುಬರದೊಡ್ಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದ ಸ್ಥಳಕ್ಕೆ ಭಾನುವಾರ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಧೈರ್ಯ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಗ್ರಾಮದಲ್ಲಿ ಕೆಲವು ಕಡೆ ಚರಂಡಿಯನ್ನು ವೈಜ್ಞಾನಿಕವಾಗಿ ನಿರ್ಮಿಸಲಾಗಿಲ್ಲ. ಈತನ್ಮಧ್ಯೆ ಸಂಬಂಧಪಟ್ಟ ಅಧಿಕಾರಿಗಳು ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದರೆ ಮುನ್ನೆಚ್ಚರಿಕೆಯ ಬಗ್ಗೆ ಕ್ರಮವಹಿಸಿಲ್ಲ. ಆಗಾಗಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ.
ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಕೂಡಲೇ ಅಗತ್ಯ ಕ್ರಮಕೈಗೊಂಡು ಹಾನಿಯಾದ ಮನೆಗಳಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರಲ್ಲದೇ ನಿಮ್ಮ ನೆರವಿಗೆ ನಾನಿದ್ದೇನೆ ಎಂದು ಅಭಯ ಹಸ್ತ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು , ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.





