ಜಿಲ್ಲೆಗಳು

ಹನೂರು : ಮಳೆಗೆ ಕುರುಬರದೊಡ್ಡಿ ಗ್ರಾಮ ಜಲಾವೃತ

ಹನೂರು : ಗುರುವಾರ ತಡರಾತ್ರಿ ಸುರಿದ ಬಾರಿ ಮಳೆಗೆ ಕುರುಬರದೊಡ್ಡಿ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದ ಪರಿಣಾಮ ಮನೆಗಳಿಗೆ ನೀರು ನುಗ್ಗಿರುವ ಘಟನೆ ಜರುಗಿದೆ.

ಅಜ್ಜೀಪುರ ಹಾಗೂ ಸೂಳೇರಿಪಾಳ್ಯ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಭಾರಿ ಮಳೆಯಾದ ಹಿನ್ನೆಲೆ ಹಾಗೂ ಉಡುತೊರೆಹಳ್ಳ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವ ಹಿನ್ನೆಲೆ ತಾಲೂಕಿನ  ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಕುರುಬರದೊಡ್ಡಿ ಗ್ರಾಮದ ನಾಲ್ಕನೇ ವಾರ್ಡ್ ನ ಮನೆಗಳಿಗೆ ನೀರು ನುಗ್ಗಿ ದಿನಸಿ ಪದಾರ್ಥಗಳು ಸೇರಿದಂತೆ ಗೃಹೋಪಯೋಗಿ ವಸ್ತುಗಳು ನಾಶಗೊಂಡಿವೆ.

ಮನೆಗಳಿಗೆ ಹಾನಿ : ಕುರುಬರದೊಡ್ಡಿ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಪುಟ್ಟಮ್ಮ,ಶಿವಣ್ಣ, ಹುಚ್ಚಮ್ಮ, ಲಕ್ಷ್ಮಣ, ಚಜ್ಜೆಗೌಡರು, ಕೆಂಪಮ್ಮ,ಇವರುಗಳ ಮನೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದು ಬಾರಿ ಪ್ರಮಾಣದಲ್ಲಿ ಹಾನಿಯಾಗುವ ಮುನ್ಸೂಚನೆ ಇದೆ ಅಲ್ಲದೆ ಪ್ರತಿ ಬಾರಿ ಮಳೆಯಾದಾಗ ಈ ರೀತಿಯಲ್ಲಿ ಘಟನೆ ಮರುಕಳಿಸುತ್ತಿದೆ ಆದರೂ ಎಚ್ಛೆತ್ತುಕೊಳ್ಳುತ್ತಿಲ್ಲ ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಡರಾತ್ರಿ ಮನೆಗಳಿಗೆ ನೀರು ನುಗ್ಗಿದ್ದರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಆದರೆ ಮನೆಯೊಳಗೆ ಮೂರರಿಂದ 4 ಅಡಿ ನೀರು ತುಂಬಿರುವುದರಿಂದ ಮುಂಜಾನೆಯಿಂದಲೂ ನೀರನ್ನು ಹೊರಗೆ ಹಾಕುವುದೇ ಆಗಿದೆ ಆದರೇ ಇನ್ನೂ ನೀರು ನಿಲ್ಲುತ್ತಿಲ್ಲ ನಮ್ಮ ಮನೆಗೆ ಹಾನಿಯಾಗಿದೆ ಈಗಾಗಲೇ ಒಂದು ಕಡೆ ಗೋಡೆ ಕುಸಿದಿದೆ ಎಂದು ಗ್ರಾಮದ ಹುಚ್ಚಮ್ಮ ಅಳಲನ್ನು ತೋಡಿಕೊಂಡಿದ್ದಾರೆ.


ಅಪಾರ ಪ್ರಮಾಣದ ಮಳೆ ಬಿದ್ದರೆ ನಮ್ಮ ಮನೆಗಳಿಗೆ ಪದೇ ಪದೇ ಈ ರೀತಿ ನೀರು ನುಗ್ಗುತ್ತಿದೆ ಇದಕ್ಕೆ ಸಂಬಂಧ ಪಟ್ಟಂತೆ ಸಾಕಷ್ಟು ಬಾರಿ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಪ್ರಯೋಜನವಾಗಿವಿಲ್ಲ,ಶೀಘ್ರವೇ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ.

ಶಂಕರ್
ಕುರುಬರದೊಡ್ಡಿ ನಿವಾಸಿ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago