Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಹನೂರು : ರಸ್ತೆ ಕಾಮಗಾರಿ ಪರಿಶೀಲನೆ

ಹನೂರು: ತಾಲ್ಲೂಕಿನ ಗಾಣಿಗಮಂಗಲ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಪರಿಶೀಲನೆ ನಡೆಸಿದರು.

ಗಾಣಿಗಮಂಗಲದ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಜಲ್ಲಿಕಲ್ಲಿನಿಂದ ಮೆಟ್ಲಿಂಗ್ ಮಾಡದೇ ಎಂ ಸ್ಯಾಂಡ್ ಬಳಸಿ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರು ನೀಡಿದ್ದರು.ಈ ಬಗ್ಗೆ ಆಂದೋಲನ ದಿನಪತ್ರಿಕೆ ಯಲ್ಲಿ ರಸ್ತೆ ಕಾಮಗಾರಿ ಕಳಪೆ ಆರೋಪ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು. ವರದಿಗೆ ಎಚ್ಚೆತ್ತ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಾ,ತಾಲ್ಲೂಕು ಅಧಿಕಾರಿ ನವೀನ್ ಮಠದ ಹಾಗೂ ಅಭಿಯಂತರರು ಗಾಣಿಗಮಂಗಲ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು ಇದೇ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!