Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಹನೂರು ಕ್ಷೇತ್ರ ಕ್ರೀಡೆಯಲ್ಲೂ ಮುಂಚೂಣಿಯಲ್ಲಿದೆ : ಶಾಸಕ ಆರ್.ನರೇಂದ್ರ

ಹನೂರು: ಹನೂರು ಶೈಕ್ಷಣಿಕ ವಲಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹಾಗೂ ಕ್ರೀಡೆಯಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಹನೂರು ಶೈಕ್ಷಣಿಕ ವಲಯವು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನವನ್ನು ಪಡೆಯುತ್ತಿದೆ. ಅಲ್ಲದೇ ಕ್ರೀಡಾಕೂಟದಲ್ಲೂ ಸಹ ಇಲ್ಲಿನ ವಿದ್ಯಾರ್ಥಿಗಳು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುವುದರ ಮೂಲಕ ಸಾಧನೆ ಮಾಡಿ ವಯಲದ ಕೀರ್ತಿಗೆ ಭಾಜನರಾಗಿದ್ದಾರೆ. ಹೀಗಾಗಿ ಕ್ರೀಡೆಯಲ್ಲೂ ಸಹ ಇಲ್ಲಿನ ವಿದ್ಯಾರ್ಥಿಗಳು ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಷಯ. ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಜತೆಗೆ ಉತ್ತಮ ಆರೋಗ್ಯ ಹೊಂದುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಸಿದರು. ಇದೇ ವೇಳೆ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಅರಣ್ಯ ಸಚಿವ ಉಮೇಶ್ ವಿ ಕತ್ತಿ ಅವರ ನಿಧನಕ್ಕೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಶಾಸಕ ಆರ್.ನರೇಂದ್ರ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರೆ. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಹನೂರು ಸೇರಿದಂತೆ ಮಂಗಲ, ಮಣಗಳ್ಳಿ, ರಾಮಾಪುರ, ಅಜ್ಜೀಪುರ, ಲೊಕ್ಕನಹಳ್ಳಿ, ಭೈರನತ್ತ, ಕೌದಳ್ಳಿ, ತೊಮಿಯಾರ್‍ಪಾಳ್ಯ, ಸಂದನಪಾಳ್ಯ, ಒಡೆಯರಪಾಳ್ಯ ಹಾಗೂ ಇನ್ನಿತರೆ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಇಒ ಶಿವರಾಜು, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಶಿಕ್ಷಣ ಸಂಯೋಜಕ ಕಿರಣ್‍ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಮುನಿನಾಯಕ ಹಾಗೂ ಇನ್ನಿತರರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ