ಜಿಲ್ಲೆಗಳು

ಅತಿ ಶೀಘ್ರದಲ್ಲಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಕ್ರಮ : ಸಚಿವ ಆರ್. ಅಶೋಕ್

ಹನೂರು: ತಾಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಹುಲ್ಲೇಪುರದ ಬಳಿ ೮.೯೩ ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು,

ಬೆಂಗಳೂರಿನ ವಿಧಾನಸಭೆಯ ಅಧೀವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಸಚಿವ ಆರ್.ಅಶೋಕ್ ಉತ್ತರಿಸಿ, ತಾಲೂಕಿನಲ್ಲಿ ಆಡಳಿತ ಸೌಧ ನಿರ್ಮಿಸಲು ಹುಲ್ಲೇಪುರ ಗ್ರಾಮದ ಸರ್ವೇ ನಂಬರ್ ೩೧೨/ಡಿ ರಲ್ಲಿ ೭.೭೬ ಎಕರೆ ಹಾಗೂ ೩೧೨/ಇ ರಲ್ಲಿ ೧.೧೭ ಎಕರೆ ಸೇರಿದಂತೆ ಒಟ್ಟು ೮.೯೩ ಎಕರೆ ಪ್ರದೇಶದಲ್ಲಿ ತಾಲೂಕು ಆಡಳಿತ ಸೌಧ  ನಿರ್ಮಿಸಲು ಕಾಯ್ದಿರಿಸಲಾಗಿದ್ದು, ಜಿಲ್ಲಾಧಿಕಾರಿ ಅವರ ಸೂಕ್ತ ಪ್ರಸ್ತಾವನೆಯನ್ನು ಪಡೆದು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಉತ್ತರ ನೀಡಿದ್ದರಲ್ಲದೇ ಈಗಾಗಲೇ ತಹಸೀಲ್ದಾರ್ ಕಚೇರಿ ಉಪ ನೋಂದಣಿ ಕಚೇರಿಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ, ಅಗ್ನಿಶಾಮಕ
ಠಾಣೆ ಹಾಗೂ ಸೆಸ್ಕ್ ಕಚೇರಿಯನ್ನು ಪ್ರಾರಂಭಿಸಲಾಗಿದ್ದು, ಇನ್ನುಳಿದ ಕಚೇರಿಗಳ ಸ್ಥಾಪನೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಗುಂಡಾಲ್ ಜಲಾಶಯದ ಕಾಲುವೆಗಳ ಅಭಿವೃದ್ಧಿಗೆ ಅನುದಾನ ನೀಡಿರುವ ಸಂಬಂಧ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉತ್ತರಿಸಿದ್ದು, ಕಳೆದ ೫ ವರ್ಷದ ಅವಧಿಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಗುಂಡಾಲ್ ಜಲಾಶಯಗಳ ಕಾಲುವೆಗಳಲ್ಲಿ ಗಿಡಗಂಟಿ ತೆರೆವುಗೊಳಿಸುವುದು, ಹೂಳೆತ್ತುವುದು ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗಾಗಿ ೯೦ ಲಕ್ಷ ರೂ ಅನುದಾನವನ್ನು ನೀಡಲಾಗಿದೆ. ಇದೀಗ ಕೆಲವು ಕಡೆಗಳಲ್ಲಿ ದುರಸ್ತಿ ಕಾರ್ಯ ಆಗಬೇಕಿರುವುದು ನಮ್ಮ ಗಮನಕ್ಕೆ ಬಂದಿದ್ದು, ಅಗತ್ಯ ಕ್ರಮವಹಿಸಲಾಗಿದೆ ಎಂದು
ತಿಳಿಸಿದ್ದಾರೆ.

ಮುಜರಾಯಿ ಸಚಿವ ಶಶಿಕಲಾ ಜೊಲ್ಲೆ ಅವರು ಉತ್ತರಿಸಿ, ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೮೬ ದೇವಸ್ಥಾನಗಳಿಗೆ ೧೦೨ ಲಕ್ಷ ರೂ ಅನುದಾನವನ್ನು ಬಿಡುಗಡೆ
ಮಾಡಲಾಗಿದ್ದು, ಅನುದಾನದ ಬಿಡುಗಡೆಯನ್ನು ಜಿಲ್ಲಾಧಿಕಾರಿ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

35 mins ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

39 mins ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

40 mins ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

45 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

52 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

58 mins ago