ಹನೂರು: ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿನ ಸೇತುವೆ ಮೇಲೆ ಮಳೆಯ ನೀರು ಯಥೇಚ್ಚವಾಗಿ ಹರಿಯುತ್ತಿರುವ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಗುರುವಾರ ಜರುಗಿದೆ.
ತಾಲ್ಲೂಕಿನಾದ್ಯಂತ ಕಳೆದ 4 ದಿನಗಳಿಂದ ಬಿಆರ್ ಟಿ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆ ಲೊಕ್ಕನಹಳ್ಳಿ ಗ್ರಾಮ ದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಯಲ್ಲಿನ ಮಸ್ಕತಿ ಹಳ್ಳ ,ಉಡುತೊರೆ ಹಳ್ಳ , ಬಸವನಗುಡಿ ಸಮೀಪದ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಗುರುವಾರ ಮಧ್ಯಾಹ್ನದಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತಮ್ಮ ಗ್ರಾಮಗಳಿಗೆ ತೆರಳಲು ತೀವ್ರ ತೊಂದರೆಯಾಗಿದೆ.
ಈ ಸೇತುವೆಗಳಿಗೆ ತಡೆಗೋಡೆ ಇಲ್ಲದ ಪರಿಣಾಮ ಹಲವಾರು ವಾಹನಗಳು ಪಲ್ಟಿಯಾಗಿದೆ. ಕಳೆದ ತಿಂಗಳು ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದರು.ಇದಲ್ಲದೆ ಕಳೆದ ವಾರ ಡಿ ವಿಲೇಜ್ ಸಮೀಪ ಉಡುತೊರೆ ಹಳ್ಳ ಜಲಾಶಯಕ್ಕೆ ನಿರ್ಮಾಣ ಮಾಡಿರುವ ಸೇತುವೆ ದುರಸ್ತಿಗೊಂಡಿದ್ದ ಹಿನ್ನೆಲೆ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು ಆದರೂ ಸಹ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದುಪಿ ಜಿ ಪಾಳ್ಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಉಡುತೊರೆಹಳ್ಳ ಮೇಲ್ಸೇತುವೆ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿ 6ತಿಂಗಳು ಕಳೆದಿದೆ.ಇನ್ನೂ ಸಹ ಕಾಮಗಾರಿ ಪ್ರಾರಂಭವಾಗಿಲ್ಲ ಅಪಘಾತ ಅನಾಹುತಗಳು ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಮೇಲ್ಸೇತುವೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಎನ್ ಕೃಷ್ಣಮೂರ್ತಿ
ಪರಿವರ್ತನಾ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಚಿಕ್ಕರಂಗಶೆಟ್ಟಿ ದೊಡ್ಡಿ ತಿಳಿಸಿದ್ದಾರೆ.