Mysore
24
broken clouds

Social Media

ಬುಧವಾರ, 26 ಮಾರ್ಚ್ 2025
Light
Dark

ಹನೂರು – ಶಿಕ್ಷಕರ ಹೊಂದಿರುವ ಅಪಾರವಾದ ಕೌಶಲ್ಯದಿಂದ ಪ್ರತಿಭೆ ಹೊರಹಾಕಲು ಸಾಧ್ಯ : ವೆಂಕಟೇಶಮೂರ್ತಿ

ಹನೂರು: ಶಿಕ್ಷಕರು ಸಹ ಅಪಾರವಾದ ಕೌಶಲ್ಯವನ್ನು ಹೊಂದಿದ್ದಾರೆ, ಅವರ ಪ್ರತಿಭೆಯನ್ನು ಹೊರಹಾಕುವಲ್ಲಿ ಈ ಒಂದು ಕ್ರೀಡಾಕೂಟವು ವೇದಿಕೆಯಾಗಿದೆ ಎಂದು ಮೈಸೂರು ವಿಭಾಗಿಯ ಉಪನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರ ಕಚೇರಿಯ ವೆಂಕಟೇಶಮೂರ್ತಿ ತಿಳಿಸಿದರು.

ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಬಳಿಕ ಅವರು ಮಾತನಾಡಿದರು.ಸಾಮಾನ್ಯ ಶಿಕ್ಷಕರಾಗಿ ಸರಳ, ಸಜ್ಜನಿಕೆಯಿಂದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಪ್ರಯುಕ್ತ ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವ ಸುಸಂದರ್ಭದಲ್ಲಿ ಕ್ರೀಡಾಕೂಟಗಳನ್ನು ಶಿಕ್ಷಕರಿಗಾಗಿ ಆಯೋಜಿಸಿರುವ ಕ್ರೀಡಾಕೂಟವು ಯಶಸ್ವಿಯಾಗಲಿ ಎಂದರು.

ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿ ಸದಾ ವಿದ್ಯಾರ್ಥಿಗಳ ಒಳಿತಿಗಾಗಿ ಶ್ರಮಿಸುತ್ತಿರುವ ಶಿಕ್ಷಕರಿಗೂ ಕ್ರೀಡಾಕೂಟ ಆಯೋಜಿಸಿರುವುದು ಸಂತಸದ ವಿಚಾರ ಪ್ರತಿಯೊಬ್ಬ ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹ. ಮ. ಗುರುಸ್ವಾಮಿ, ತಾಲೂಕು ದೈಹಿಕ ಪರಿವೀಕ್ಷಕ ಮಹದೇವ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಮುನಿಯ ನಾಯಕ, ಶಿವರಾಜಮ್ಮ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಸೇರಿದಂತೆ ಇನ್ನಿತರೆ ಸಂಘಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರುಗಳು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ