ಜಿಲ್ಲೆಗಳು

ಹಾಸನ: ಗ್ರೈಂಡರ್ ಮಿಕ್ಸಿ ಸ್ಫೋಟ ಆರೋಪಿ ಬಂಧನ

 ವಿಚ್ಛೇದಿತ ಮಹಿಳೆಗೆ ಪಾಠ ಕಲಿಸಲು ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ ಭಗ್ನಪ್ರೇಮಿ

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ ನಡೆದಿದ್ದ ಮಿಕ್ಸರ್ ಸ್ಫೋಟ ಪ್ರಕರಣದ ರಹಸ್ಯ ಬಯಲಾಗಿದ್ದು ಇದು  ಮದುವೆ ನಿರಾಕರಿಸಿದ್ದಕ್ಕೆ ವಿಚ್ಛೇದಿತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿದ ಪ್ರಕರಣ ಎಂಬುದು ಬೆಳಕಿಗೆ ಬಂದಿದೆ.
ಬೆಂಗಳೂರಿನ ಅನೂಪ್ ಕುಮಾರ್ ಎಂಬಾತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿ ಮಿಕ್ಸರ್ನಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ್ದ ಎಂಬುದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮಂಗಳೂರಿನ ಕುಕ್ಕರ್ ಸ್ಫೋಟದ ಕಹಿ ನೆನೆಪು ಮಾಸುವ ಬೆನ್ನಲ್ಲೇ ಹಾಸನದಲ್ಲಿ ಡಿಸೆಂಬರ್ 26ರಂದು ಸಂಜೆ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ಸ್ಫೋಟಗೊಂಡಿತ್ತು. ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಇದೊಂದು ಪ್ರೇಮ ವೈಫಲ್ಯ ಪ್ರಕರಣವೆಂಬುದು ಗೊತ್ತಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಹಾಸನದ ಮಹಿಳೆಯೊಬ್ಬರು ವಿವಾಹ ವಿಚ್ಛೇದನದ ನಂತರ ಮ್ಯಾಟ್ರಿಮೋನಿಯಲ್ಲಿ ತನ್ನ ಫೋಟೋ ಅಪ್ಲೋಡ್ ಮಾಡಿದ್ದರು. ಮಹಿಳೆಯ ಅಂದಕ್ಕೆ ಮಾರುಹೋಗಿ ಬೆಂಗಳೂರು ಮೂಲದ ಅನೂಪ್ ಮದುವೆ ಪ್ರಸ್ತಾಪ ಮಾಡಿದ್ದರು. ಇದನ್ನು ಒಪ್ಪಿಕೊಂಡಿದ್ದ ಮಹಿಳೆ ಅನೂಪ್ ಜತೆ ಸುತ್ತಾಡಿದ್ದರು. ಅನೂಪ್ಕುಮಾರ್ ವಿಶ್ವಾಸ ಗಳಿಸಿ ಆತನಿಂದ ಲಕ್ಷಾಂತರ ರೂ. ಹಣ ಸಾಲ ಪಡೆದಿದ್ದರು ಎನ್ನಲಾಗಿದೆ.
ಮಹಿಳೆ ವಿರುದ್ಧ ಆಕ್ರೋಶಗೊಂಡು ಕೃತ್ಯ
ಕೊಟ್ಟ ಹಣ ವಾಪಸ್ ನೀಡದೆ, ಮದುವೆಗೂ ಒಪ್ಪದೆ ಮಹಿಳೆ ಅನೂಪ್ನಿಂದ ಅಂತರ ಕಾಯ್ದುಕೊಂಡಿದ್ದರು. ಇದರಿಂದ ತೀವ್ರ ನಿರಾಸೆಗೆ ಒಳಗಾದ ಆರೋಪಿ, ಒಂದೋ ಮದುವೆಯಾಗಬೇಕು ಇಲ್ಲವೇ ಹಣ ವಾಪಸ್ ನೀಡಬೇಕು ಎಂದು ಮಹಿಳೆಗೆ ತಿಳಿಸಿದ್ದ. ಈ ಮಧ್ಯೆ, ಒಂದೆರಡು ಬಾರಿ ಹಾಸನಕ್ಕೆ ಬಂದು ಮಹಿಳೆ ಮನೆ ಎದುರು ಗಲಾಟೆ ಮಾಡಿದ್ದ. ಇದರ ಬೆನ್ನಲ್ಲೇ, ಅನೂಪ್ ವಿರುದ್ಧ ಪೊಲೀಸರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಮಹಿಳೆ ದೂರು ನೀಡಿದ್ದರು.
ಮಿಕ್ಸರ್ನಲ್ಲಿ ಡಿಟೋನೇಟರ್ ಇಟ್ಟು ಕೊರಿಯರ್
ತನಗೆ ಮೋಸವಾಗಿದೆ ಎಂದು ಮಹಿಳೆ ವಿರುದ್ಧ ಕೆರಳಿದ ಅನೂಪ್ ಮೊದಲು ಸೀರೆ, ನಂತರ ಸೀರಿಯಲ್ ಸೆಟ್ ಪಾರ್ಸೆಲ್ ಕಳುಹಿಸಿದ್ದ. ಇದನ್ನು ನಿರಾಕರಿಸಿದ್ದ ಮಹಿಳೆ ಸೀರೆಯನ್ನು ವಾಪಾಸ್ ಕಳುಹಿಸಿ ನಿಂದಿಸಿದ್ದರು. ಹೀಗಾಗಿ ಮೂರನೇ ಬಾರಿ ಮಿಕ್ಸಿಯಲ್ಲಿ ಡಿಟೋನೇಟರ್ ಇಟ್ಟು ಕಳುಹಿಸಿದ್ದಾನೆ. ಮೋಸ ಮಾಡಿದವಳ ಮುಖ ವಿಕಾರವಾಗಬೇಕು ಅಥವಾ ಆಕೆ ಸಾಯಬೇಕು ಎಂಬ ಉದ್ದೇಶದಿಂದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊರಿಯರ್ ಮೂಲಕ ಬಂದ ಮಿಕ್ಸರ್ ಅನ್ನು ಡಿಸೆಂಬರ್ 17ರಂದೇ ಕೊರಿಯರ್ ಮಾಲೀಕ ಶಶಿ ಡೆಲಿವರಿ ಮಾಡಿಸಿದ್ದರು. ಆದರೆ ಅದನ್ನು ನಿರಾಕರಿಸಿದ್ದ ಮಹಿಳೆ ವಾಪಸ್ ಕಳುಹಿಸುವಂತೆ ಕೊರಿಯರ್ನವರಿಗೆ ತಿಳಿಸಿದ್ದರು. ಕೊರಿಯರ್ ಮಾಡಿದವರ ಪೂರ್ಣ ವಿಳಾಸ ಇಲ್ಲದ ಕಾರಣ ಅದನ್ನು ವಾಪಸ್ ಕಳಿಸಲು 350 ರೂ. ಶುಲ್ಕ ನೀಡಬೇಕೆಂದು ಕೊರಿಯರ್ ಮಾಲೀಕ ಕೇಳಿದ್ದರು. ಆದರೆ ಹಣ ನೀಡದೆ ಮಹಿಳೆ ವಾಪಸಾಗಿದ್ದರು. ವಾಪಸ್ ಕಳುಹಿಸಲು ಸೂಕ್ತ ವಿಳಾಸ ಇಲ್ಲದ ಕಾರಣ ಕೊರಿಯರ್ ಅಂಗಡಿ ಮಾಲೀಕ ಅದನ್ನು ಬಿಚ್ಚಿ ಪರಿಶೀಲನೆ ಮಾಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿತ್ತು

andolanait

Recent Posts

ಹೊಲಗದ್ದೆಗಳಲ್ಲಿ ಹಕ್ಕಿಪಕ್ಷಿಗಳು ಏಕೆ ಬೇಕು?

• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…

13 mins ago

ಕೊಬ್ಬರಿ ಬೆಂಬಲ ಬೆಲೆ ಏರಿಕೆ

ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…

25 mins ago

ಭತ್ತದ ಕೊಯ್ಲಿಗೆ ಮುನ್ನ ಕೆಲವು ಸಲಹೆಗಳು

• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…

31 mins ago

ರಾಜ್ಯದಲ್ಲಿ ಬಗೆಹರಿಯದ ಬಿಜೆಪಿ ಬಣ ಹೋರಾಟ

ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…

40 mins ago

ಸದನದಲ್ಲಿ ವೈಯಕ್ತಿಕ ತೇಜೋವಧೆ ಸಲ್ಲದು; ಮಹಿಳಾ ಸದಸ್ಯರ ಬಗ್ಗೆ ಪ್ರತಿಕ್ರಿಯಿಸುವಾಗ ಎಚ್ಚರ ಬೇಕು

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…

47 mins ago

ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು

ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್‌ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…

54 mins ago