ಹಾಸನ

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೇಬೀಡಿನ ಘಟ್ಟದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿ.ಕೆ.ಮಲ್ಲೇಶ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ನಿವೃತ್ತ ಯೋಧ. ಕಲ್ಲೇಶ್‌ ಎರಡು ಮದುವೆಯಾಗಿದ್ದರು. ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಯನ್ನೂ ಪಡೆಯುತ್ತಿದ್ದರು.

ಎರಡು ದಿನಗಳ ಹಿಂದೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ನಿ ಬಳಿ ಹೇಳಿದ್ದರಂತೆ. ಪತ್ನಿ ಸಮಾಧಾನಪಡಿಸಿದ್ದರು. ಆದರೆ ಇಂದು ಬೆಳಿಗ್ಗೆ ಸಕಲೇಶಪುರ ಪೊಲೀಸ್‌ ಠಾಣೆಗೆ ಕರೆ ಮಾಡಿದ್ದ ಕಲ್ಲೇಶ್‌, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಫೋನ್‌ ಕಟ್‌ ಮಾಡಿದ್ದಾರೆ. ತಕ್ಷಣ ಹಳೇಬೀಡು ಪೊಲೀಸರಿಗೆ ಸಕಲೇಶಪುರ ಪೊಲೀಸರು ಮಾಹಿತಿ ನೀಡಿ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದರು. ಘಟ್ಟದಹಳ್ಳಿ ಗ್ರಾಮಕ್ಕೆ ಪೊಲೀಸರು ಬರುವಷ್ಟರಲ್ಲಿ ಕಲ್ಲೇಶ್‌ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

4 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

4 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

4 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

4 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

4 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

4 hours ago