Mysore
20
few clouds

Social Media

ಮಂಗಳವಾರ, 20 ಜನವರಿ 2026
Light
Dark

ದೀಪಾವಳಿ ಹಬ್ಬದ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ದೀಪಾವಳಿ ಹಬ್ಬದ ದಿನವಾದ ಇಂದು ಕೂಡ ಭಕ್ತರ ದಂಡೇ ಹರಿದು ಬಂದಿದೆ.

ನಾಳೆ ಸಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ದೇವಿಯ ದರ್ಶನದ ಕಡೆಯ ದಿನವಾದ ಇಂದು ದೇವಾಲಯಕ್ಕೆ ಸಹಸ್ರಾರು ಭಕ್ತರು ಬಂದಿದ್ದಾರೆ.

ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದು, ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.

ನಾಳೆ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆಯವರೆಗೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Tags:
error: Content is protected !!