Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು!

ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ಮರುವನಹಳ್ಳಿ ಗ್ರಾಮದ ಸೋಮಶೇಖರ್-ಮಣಿ ದಂಪತಿ ಪುತ್ರ ಕಿರಣ್ (14) ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ.

ಎಂ.ದಾಸಪುರ ಗ್ರಾಮದ ನಿರ್ಮಲ ವಿದ್ಯಾಶಾಲೆಯಲ್ಲಿ ಒಂಭತ್ತನೇ ತರಗತಿ ಓದುತ್ತಿದ್ದ ಕಿರಣ್, ಮಧ್ಯಾಹ್ನ ಮೂವರು ಸ್ನೇಹಿತರೊಂದಿಗೆ ಗ್ರಾಮದ ಬಳಿಯಿರುವ ಕಟ್ಟೆಯಲ್ಲಿ ಈಜಲು ತೆರಳಿದ್ದ. ಈ ವೇಳೆ ಕಟ್ಟೆಯಲ್ಲಿ ಆಳವಾದ ಗುಂಡಿ ಇದ್ದುದ್ದರಿಂದ ಈಜು ಬಾರದೆ ನೀರನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಅದೃಷ್ಟವಶಾತ್ ಇನ್ನುಳಿತ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಿರಣ್ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!