ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ.
27 ವರ್ಷ ಪುನೀತ್ ಎಂಬಾತನೇ ಮೃತ ದುರ್ದೈವಿ. ಪುನೀತ್ ಕಳೆದ ಆರು ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ಎಂದಿನಂತೆಯೇ ಸಮವಸ್ತ್ರ ಧರಿಸಿ ಕೆಲಸಕ್ಕೆ ತೆರಳಿದ್ದ. ರಾತ್ರಿ ಪುನೀತ್ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತಂದು ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಬುಧವಾರ ಮಧ್ಯಾಹ್ನದ ವೇಳೆ ಕಾರ್ಖಾನೆಯ ನೀರಿನ ಸಂಪ್‌ನಲ್ಲಿ ನಿಂತಿರುವ ಸ್ಥಿತಿಯಲ್ಲಿ ಪುನೀತ್ ಮೃತದೇಹ ಪತ್ತೆಯಾಗಿದೆ.
ಪುನೀತ್‌ನದ್ದು ಸಹಜ ಸಾವಲ್ಲ. ಕೊಲೆ ಎಂದು ಆರೋಪಿಸಿರುವ ಕುಟುಂಬಸ್ಥರು ಹಾಗೂ ಸ್ನೇಹಿತರು, ಕಾರ್ಖಾನೆ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…