Mysore
27
overcast clouds

Social Media

ಮಂಗಳವಾರ, 09 ಜೂನ್ 2026
Light
Dark

ಪ್ರೀ ವೆಡ್ಡಿಂಗ್‌ ಶೂಟ್‌ಗೆ ಹೋಗುತ್ತಿದ್ದ ವೇಳೆ ಕಾರು ಅಪಘಾತ: ಯುವಕ ಸಾವು

ಹಾಸನ: 10 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೋರ್ವ ಪ್ರೀ ವೆಡ್ಡಿಂಗ್‌ ಶೂಟ್‌ಗೆ ಹೂಗುತ್ತಿದ್ದ ವೇಳೆ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ನಡೆದಿದೆ.

ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ಮನು ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.

ಮೇ.10ರಂದು ಮನು ವಿವಾಹ ನಿಶ್ಚಯವಾಗಿತ್ತು. ಭಾವಿ ವರ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮದುವೆ ಮನೆಯ ಸಂಭ್ರಮದಲ್ಲಿರಬೇಕಾದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ.

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!