ಹಾಸನ: ಖಾಸಗಿ ಬಸ್ ತಡೆದು ಪುಡಿ ರೌಡಿಯೋರ್ವ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕಾರನ್ನು ಬಸ್ಸಿನ ಮುಂದೆ ಅಡ್ಡ ಹಾಕಿ ನಿಲ್ಲಿಸಿದ್ದಾನೆ.
ಈ ವೇಳೆ ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿ ರಂಪಾಟ ಮಾಡಿದ್ದಾನೆ.
ಪುಡಿ ರೌಡಿಯ ಅಟ್ಟಹಾಸವನ್ನು ಬಸ್‌ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಫುಲ್ ವೈರಲ್ ಆಗಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.